Site icon Vistara News

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Karnataka Weather Forecast

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version