Site icon Vistara News

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Heavy Rain warning In karnataka

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version