Site icon Vistara News

Karnataka Weather : ಎರಡು ದಿನದ ನಂತರ ಭಯಂಕರ ಮಳೆ ಸಾಧ್ಯತೆ!

Girl running in rain

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿಸಣ್ಣ ಪ್ರಮಾಣದಲ್ಲಿ ಮಳೆಯಾಗುವ (Karnataka weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ. ಹಿಂಗಾರು ಪ್ರವೇಶ ತಡವಾಗಿ ಇರುವುದರಿಂದ ಎರಡು ದಿನಗಳು ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಆದರೆ ಬಹುತೇಕ ಕಡೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ.

ಮೈಸೂರು-ಮಂಡ್ಯದಲ್ಲಿ ಸಾಧಾರಣ ಮಳೆ

ದಕ್ಷಿಣ ಒಳನಾಡಿನ ಮೈಸೂರಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಮಂಡ್ಯ ಮತ್ತು ಚಾಮರಾಜನಗರದಲ್ಲಿ ತುಂತುರು ಮಳೆ ಬೀಳಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ, ಶಿವಮೊಗ್ಗದಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಹಾಗೂ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Wife kills husband : ತಾರಕಕ್ಕೇರಿದ ಜಗಳ: ಮಗನ ಜತೆ ಸೇರಿ ಗಂಡನನ್ನೇ ಕೊಂದ ಹೆಂಡತಿ

ತಾಪಮಾನ ಏರಿಕೆ

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೂಟೆ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 33 ಡಿ.ಸೆ – 20 ಡಿ.ಸೆ
ಹೊನ್ನಾವರ: 33 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version