ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.
ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!
ಹುಡುಗಿಯರ ಮಾನ್ಸೂನ್ ಡ್ರೆಸ್ ಹೇಗಿರಬೇಕು? ಹೇಗಿರಬಾರದು?
ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್ ಜಿ ಹುಡುಗಿಯರು, ಯಾವುದೇ ಸೀಸನ್ ಟ್ರೆಂಡ್ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.
ಮಾನ್ಸೂನ್ ಡ್ರೆಸ್‌ಗಳು
ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್ ಡ್ರೆಸ್, ಕೋಟ್ ಡ್ರೆಸ್-ಫ್ರಾಕ್ಸ್, ಸ್ಕೆಟರ್ ಡ್ರೆಸ್, ಮಿಡಿ ಡ್ರೆಸ್, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.
ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ
ಆಂಕೆಲ್ ಲೆಂಥ್, ಕ್ರಾಪ್ಡ್ ಪ್ಯಾಂಟ್, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್, ಬೂಟ್ ಕಟ್, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.
ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ
ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.
ಭಾರವಿಲ್ಲದ ಲೈಟ್‌ವೈಟ್ ಉಡುಗೆ ಧರಿಸಿ
ಲೇಯರಿಂಗ್ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್ ಡ್ರೆಸ್‌ಗಳಿಗೆ ಸೈ ಎನ್ನಿ.
ಹೆವಿ ಎಥ್ನಿಕ್ ಡಿಸೈನರ್‌ವೇರ್ ಅವಾಯ್ಡ್ ಮಾಡಿ
ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್ ಲೆಂಥ್ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್ ಲೆಂಥ್ ಚೂಡಿದಾರ್, ಸಲ್ವಾರ್‌ಗಳನ್ನು ಧರಿಸಿ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ