Site icon Vistara News

Karnataka Weather : ರಾಜ್ಯದ ಹಲವೆಡೆ ಮಳೆ ಅಲರ್ಟ್‌; ಬೆಂಗಳೂರಲ್ಲಿ ಹೇಗೆ?

Karnataka Weather Forecast

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ (Karnataka Weather Forecast) ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯೊಂದಿಗೆ (Heavy Rain) ಗುಡುಗು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಜೂನ್‌ 7ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬುಧವಾರ ಕರಾವಳಿಯ ಉತ್ತರ ಕನ್ನಡದಲ್ಲಿ ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದೆ. ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಯ ವೇಗವು 30-40 ಕಿಮೀ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ದ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ಯಾದಗಿರಿಯಲ್ಲಿ ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆ ಹಾನಿ

ಯಾದಗಿರಿಯಲ್ಲಿ ನಿನ್ನೆ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಸಿಡಿಲು ಬಡಿದು ನಿರ್ಮಾಣ ಹಂತದ ಮನೆ ಗೋಡೆಗೆ ಹಾನಿಯಾಗಿದೆ. ಯಾದಗಿರಿಯ ಸುರಪುರ ತಾಲೂಕಿನ ತಳ್ಳಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದ್ದು, ಮರದ ಪಕ್ಕದಲ್ಲಿದ್ದ ಗುಡಿಸಲಿನಲ್ಲಿರುವ ಟಿವಿ ಸುಟ್ಟು ಹೋಗಿದೆ. ಗಿರಿನಗರದ ರಮೇಶ್ ಎಂಬುವವರ ಗುಡಿಸಲು ಹಾನಿಯಾಗಿದೆ. ಭಾರೀ ಮಳೆಗೆ ರೈಲ್ವೆ ನಿಲ್ದಾಣ ಸಮೀಪದ ಭವಾನಿ ಮಂದಿರದ ಮುಂಭಾಗದಲ್ಲಿ ಆಲದ ಮರ ಧರೆಗುರುಳಿದೆ.

ಬಿರುಗಾಳಿ ಸಹಿತ ಮಳೆಗೆ ಆಟೋ ಮೇಲೆ ಉರುಳಿ ಬಿದ್ದ ಮರ

ನಿನ್ನೆ ಮಂಗಳವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಿಂತಿದ್ದ ಆಟೋ ಮೇಲೆ ಮರ ಉರುಳಿ ಬಿದ್ದ ಘಟನೆ ನಗರದ ತ್ರಿಪುರಾಂತನಲ್ಲಿ ಜರುಗಿದೆ. ತ್ರಿಪುರಾಂತನ ಮಡಿವಾಳ ವೃತ್ತದಲ್ಲಿಯ ಮುಖ್ಯ ರಸ್ತೆ ಬದಿಯಲ್ಲಿ ನಿಲ್ಲಿಸಿದ ಆಟೋ ಮೇಲೆ ಬೃಹತ್ ಗಾತ್ರದ ಬೇವಿನ ಮರ ಉರುಳಿ ಬಿದ್ದು, ಆಟೋ ಜಖಂಗೊಂಡಿದೆ.
ನಗರದ ಹರಳಯ್ಯ ವೃತ್ತದ ಸಮೀಪದ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಮುಖ್ಯ ರಸ್ತೆ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಕೆಲ ಕಾಲ ರಸ್ತೆ ಸಂಚಾರ ಬದಲಾಯಿಸಲಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನಗರಸಭೆ ಅಧಿಕಾರಿಗಳು ತಕ್ಷಣ ಮರ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version