Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ - Vistara News

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

Karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

Karnataka Rain : ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

VISTARANEWS.COM


on

By

karnataka rain
Koo

ಬೆಳಗಾವಿ: ಬೆಳಗಾವಿಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ (Karnataka Rain) ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

karnataka rain

ಕೊಚ್ಚಿ ಹೋದ ಬೈಕ್‌

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

Karnataka Rain : ಭಾರಿ ಮಳೆಗೆ ಅವಾಂತರವು ಮುಂದುವರಿದಿದ್ದು, ಆಗುಂಬೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಕೆಲ ಗ್ರಾಮದಲ್ಲಿ ನೀರು ನುಗ್ಗಿದ್ದು, ನದಿಯಂತೆ ಸೃಷ್ಟಿಯಾಗಿದೆ.

VISTARANEWS.COM


on

By

karnataka Rain
Koo

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು (Karnataka Rain) ಮೃತಪಟ್ಟಿದ್ದಾರೆ. ನಾಗೇಂದ್ರ (40) ಸಿಡಿಲು ಬಡಿದು ಮೃತಪಟ್ಟವರು.

ಆಗುಂಬೆ ಸಮೀಪದ ಬೀದರಗೋಡು ಗ್ರಾಮದ ನಿವಾಸಿಯಾದ ನಾಗೇಂದ್ರ ಅವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಎಂಬುವರ ಅಡಿಕೆ ತೋಟದಲ್ಲಿ ಕಳೆ ತೆಗೆಯುತ್ತಿದ್ದರು. ಈ ಸಂದರ್ಭದಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ನಾಗೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಳೆ ಶುರುವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

ಇದನ್ನೂ ಓದಿ: Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

Karnataka Weather forecast : ಒಳನಾಡು, ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರಿ (Heavy Rain news) ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 7 ರಿಂದ 10ರವರೆಗೆ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಐದು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದ ಭಾರಿ ಮಳೆ ಸಾಧ್ಯತೆ ಇದೆ. ವಿಜಯಪುರ, ಕೊಪ್ಪಳ, ವಿಜಯನಗರ ಮತ್ತು ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಯೆಲ್ಲೋ ಅಲರ್ಟ್ ಘೋಷಣೆ:

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಐದು ದಿನಗಳು ಸಮುದ್ರಕ್ಕೆ ಇಳಿಯುವಂತಿಲ್ಲ

ಜೂನ್ 7ರಿಂದ 10 ರವರೆಗೆ ಹಲವೆಡೆ ಗಂಟೆಗೆ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Karnataka Weather Forecast: ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆ ಭರ್ಜರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ, ಹಾಸನದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇನ್ನು ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಳನಾಡಿನ ಬೀದರ್‌, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳುರು, ಚಿತ್ರದುರ್ಗ, ದಾವಣಗೆರೆ, ಕೊಡಗು ಹಾಗೂ ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಮುಂದುವರಿದ ಮಳೆ ಅವಾಂತರ

ಕೋಲಾರದಲ್ಲಿ ಗುರುವಾರ ಸುರಿದ ದಿಢೀರ್‌ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತಗೊಂಡಿತ್ತು. ಸುಮಾರು 2-3 ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು. ದೊಡ್ಡ ದೊಡ್ಡ ವಾಹನಗಳು ಜಲಾವೃತಗೊಂಡ ರಸ್ತೆಯಲ್ಲೇ ಬಂದರೆ, ಬೈಕ್‌ ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

karnataka weather Forecast

ಇತ್ತ ಶಾಲಾ ‌ಮಕ್ಕಳು ಮನೆಗೆ ತೆರಳಲು ಹರಸಾಹಸ ಪಡೆಬೇಕಾಯಿತು. ಅಪಾಯವನ್ನು ಲೆಕ್ಕಿಸದೆ ಸೈಕಲ್‌ನಲ್ಲಿ ಹೋದ ಶಾಲಾ ವಿದ್ಯಾರ್ಥಿಯೊಬ್ಬ ನೀರಿನ ರಭಸಕ್ಕೆ ವಾಪಸ್‌ ಹಿಂದಕ್ಕೆ ಬಂದಿದ್ದ. ಅಂಡರ್‌ಪಾಸ್‌ನಲ್ಲಿ ನೀರು ಸರಿಯಾಗಿ ಹರಿದು ಹೋಗಲು ಆಗದ ಕಾರಣಕ್ಕೆ ಈ ಸಮಸ್ಯೆ ಆಗಿದೆ ಎಂದು ಸಾರ್ವಜನಿಕರು ಕಿಡಿಕಾರಿದರು.

karnataka weather Forecast

ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗವಿದು. ಪ್ರತಿ ಬಾರಿ ಮಳೆಯಾದರೂ ಇದೇ ಪರಿಸ್ಥಿತಿ ಎದುರಾಗುತ್ತದೆ. ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Karnataka weather Forecast

ಇನ್ನೂ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ಆದರೆ ಕೆಲವೆಡೆ ಮರಗಳ ತೆರವು ಕಾರ್ಯಾಚರಣೆ ನಡೆದಿಲ್ಲ. ರಸ್ತೆ ಹಾಗೂ ಫುಟ್‌ಪಾತ್‌ ಮಧ್ಯೆ ಮರದ ರೆಂಬೆ, ಕೊಂಬೆಗಳು ಬಿದ್ದಿವೆ. ಹೀಗಾಗಿ ಜನರ ಓಡಾಟ ಸೇರಿ ವ್ಯಾಪಾರಸ್ಥರು ಪರದಾಡಬೇಕಾಗಿದೆ. ಇನ್ನೂ ಜಯನಗರದಲ್ಲಿ ಮರಗಳು ಬಿದ್ದ ಕಾರಣ ವ್ಯಾಪಾರಸ್ಥರಿಗೆ ಅನಾನುಕೂಲವಾಗಿದೆ. ಬಿಬಿಎಂಪಿ‌ಯವರು ಮರ ಕತ್ತರಿಸಿ ಪಕ್ಕಕ್ಕೆ ಹಾಕಿ ಹೋಗಿದ್ದಾರೆ. ಆದರೆ ಅದನ್ನು ತೆರವು ಮಾಡದೆ ಇರುವುದರಿಂದ ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ ಎಂದು ವೃದ್ಧೆಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Niveditha Gowda chandan shetty divorce
ಸ್ಯಾಂಡಲ್ ವುಡ್11 mins ago

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Election results 2024
ಪ್ರಮುಖ ಸುದ್ದಿ18 mins ago

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Narendra Modi
ದೇಶ33 mins ago

Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Kangana Ranaut
ದೇಶ41 mins ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

Narendra Modi
Lok Sabha Election 20241 hour ago

Narendra Modi: ಅಕೌಂಟ್‌ಗೆ ಲಕ್ಷ ರೂ. ಹಾಕ್ತೇವೆ ಎಂದರೂ ಜನ ಕಾಂಗ್ರೆಸ್‌ಗೆ ಮತ ಹಾಕಲಿಲ್ಲ: ಮೋದಿ ವ್ಯಂಗ್ಯ

Prajwal Revanna Case
ಕರ್ನಾಟಕ2 hours ago

Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

Pesticides in Spices
ಕರ್ನಾಟಕ2 hours ago

Pesticides in Spices: MDH, Everest ಬೆನ್ನಲ್ಲೇ ರಾಜ್ಯದ ಮಸಾಲೆ ಪದಾರ್ಥಗಳಿಗೂ ತಟ್ಟಿದ ಬ್ಯಾನ್‌ ಬಿಸಿ

Narendra Modi
Lok Sabha Election 20242 hours ago

Narendra Modi: ಮುಂದಿನ ಹತ್ತು ವರ್ಷ ನಾವೇ: ನರೇಂದ್ರ ಮೋದಿ

Nikhil Kumaraswamy may Good Bye To Cinema
ಸ್ಯಾಂಡಲ್ ವುಡ್2 hours ago

Nikhil Kumaraswamy: ಸಿನಿಮಾಗೆ ಗುಡ್‌ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ?

Road accident
ಬೆಂಗಳೂರು2 hours ago

Road Accident: ವಾಟರ್ ಟ್ಯಾಂಕರ್ ಡಿಕ್ಕಿಯಾಗಿ ಅಕ್ಕ-ತಮ್ಮ ಸಾವು; ಕಾಲೇಜಿಗೆ ಹೋದ ಮೊದಲ ದಿನವೇ ದುರಂತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌