ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆ (Rain News) ಸುರಿಯುತ್ತಿದ್ದು, ಇನ್ನೊಂದು ವಾರವೂ ಮಳೆಯ (Karnataka weather Forecast) ಸಿಂಚನವಾಗಲಿದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ (Rain alert) ಸಾಧ್ಯತೆ ಇದ್ದರೆ, ಉತ್ತರ ಒಳನಾಡಲ್ಲಿ ಹಗುರದಿಂದ ಕೂಡಿದ (Karnataka weather Forecast) ಮಳೆಯಾಗಲಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರಮುಖವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗಲಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ರಾಜಧಾನಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಂಜು ಮುಸುಕುವ ಸಾಧ್ಯತೆ ಇದೆ. ಸಂಜೆ ಅಥವಾ ರಾತ್ರಿ ಹೊತ್ತು ಮಳೆ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Rain News : ಕರಾವಳಿ, ಮಲೆನಾಡಿನಲ್ಲಿ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಹಾಸನದಲ್ಲಿ ತುಂತುರು ಮಳೆ
ಗುರುವಾರದಂದು ಹಾಸನ ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗಿದೆ. ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ದಿಢೀರ್ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆಯೊಂದಿಗೆ ಚಳಿಯು ಜತೆಯಾಗಿದೆ. ಸಕಲೇಶಪುರ, ಆಲೂರು ಭಾಗದಲ್ಲಿ ಬೆಳಗ್ಗೆಯಿಂದಲೂ ಮಳೆ ಸುರಿಯುತ್ತಿದೆ.
ಕಾಫಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದ ಮಳೆ
ಇತ್ತ ಕೊಡಗು ಜಿಲ್ಲೆಯ ಅಲ್ಲಲ್ಲಿ ಮಳೆಯ ಸಿಂಚನವಾಗಿದೆ. ಗುರುವಾರ ಮುಂಜಾನೆಯಿಂದಲೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ಆಗಾಗ ಮಳೆಯು ದರ್ಶನ ನೀಡುತ್ತಿದ್ದು, ಸದ್ಯ ಕಾಫಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಕೊಡಗಿನ ಕಾಫಿ ಕೃಷಿಕರಲ್ಲಿ ಅಕಾಲಿಕ ಮಳೆಯು ಆತಂಕವನ್ನು ಹೆಚ್ಚಿಸಿದೆ. ಮಡಿಕೇರಿ, ನಾಪೋಕ್ಲು, ಕುಶಾಲನಗರ, ಸೋಮವಾರಪೇಟೆ ಸೇರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ.
ಬುಧವಾರ ಕೋಟ (ಉಡುಪಿ ಜಿಲ್ಲೆ) 4, ಹೊನ್ನಾವರ, ಮಂಕಿ (ಎರಡೂ ಉತ್ತರ ಕನ್ನಡ ಜಿಲ್ಲೆ) 3, ಮಂಗಳೂರು, ಕುಮಟಾ (ಉತ್ತರ ಕನ್ನಡ ಜಿಲ್ಲೆ) 3, ಉಡುಪಿ, ಕುಂದಾಪುರ (ಉಡುಪಿ ಜಿಲ್ಲೆ) 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ) 2, ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ) 2, ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ) 2, ಬಾಳೆಹೊನ್ನೂರು, ಜಯಪುರ (ಎರಡೂ ಚಿಕ್ಕಮಗಳೂರು ಜಿಲ್ಲೆ) 2, ಪುತ್ತೂರು ಎಚ್‌ಎಂಎಸ್ (ದಕ್ಷಿಣ ಕನ್ನಡ ಜಿಲ್ಲೆ) 1. ಕಳಸ (ಚಿಕ್ಕಮಗಳೂರು ಜಿಲ್ಲೆ) 1 ಸೆಂ.ಮೀ ಮಳೆಯಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ