ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.
ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಹೀಟ್ ವೇವ್ ವಾರ್ನಿಂಗ್
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ