Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌! - Vistara News

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

Karnataka weather forecast Heavy rain alert
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ

Karnataka Weather Forecast : ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಇರಲಿದ್ದು, ಹಲವೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಲಿದೆ.

VISTARANEWS.COM


on

By

Dry weather continues in karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನೂ ರಾಜ್ಯಾದ್ಯಂತ ಭಾನುವಾರ ಒಣ ಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37.4 ಡಿ.ಸೆ ದಾಖಲಾಗಿದ್ದರೆ, ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 16.9 ಡಿ.ಸೆ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇನ್ನೂ ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿ ಸೆಲ್ಸಿಯಸ್ ನಿಂದ 11 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿದೆ. ರಾಯಚೂರು ಮತ್ತು ದಾವಣಗೆರೆ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್‌ನಿಂದ 43 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: Haveri News : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ; ಯುವಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಅರಬ್ಬಿ ಸಮುದ್ರದಲ್ಲಿ ಭಾರೀ‌ ಗಾಳಿ; ಕೆಟ್ಟು ನಿಂತ ಬೋಟ್‌ ಮುಳುಗಡೆ

ಅರಬ್ಬಿ ಸಮುದ್ರದಲ್ಲಿ ಭಾರಿ ಗಾಳಿ ಬೀಸುತ್ತಿದೆ. ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ 17 ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡದ ಕಾರವಾರದ ಮುದಗಾ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಂದ್ರು ತಾಂಡೇಲ್ ಎಂಬುವವರಿಗೆ ಸೇರಿದ್ದ ಓಂ ನಮಃ ಶಿವಾಯ ಹೆಸರಿನ ಬೋಟು, ಮುದಗಾ ಬಂದರಿನಿಂದ ಹೊರಟಿತ್ತು. ಆದರೆ ಈ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬೋಟ್‌ ಸಮುದ್ರದಲ್ಲಿ ಮುಳುಗಡೆ ಆಗಿತ್ತು. ಈ ವೇಳೆ ಬೋಟ್‌ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು. ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಛತ್ರಿ ಇಲ್ಲದೇ ಹೊರಗೆ No Entry; ಇದು ಸೂರ್ಯನ ಟಾರ್ಚರ್‌

Dry Weather: ಉತ್ತರ ಒಳನಾಡಿನಿಂದ ದಕ್ಷಿಣ ಒಳನಾಡವರೆಗೂ, ಕರಾವಳಿಯಿಂದ ಮಲೆನಾಡವರೆಗೆ ಗರಿಷ್ಠ ತಾಪಮಾನ ಏರಿಕೆ ಆಗಲಿದೆ ಎಂದು ಹವಾಮಾನ ತಜ್ಞರು (Karnataka Weather Forecast) ಸೂಚಿಸಿದ್ದಾರೆ.

VISTARANEWS.COM


on

By

Dry weather likely to prevail over the State
Koo

ಬೆಂಗಳೂರು: ಸೂರ್ಯ ನೆತ್ತಿಗೆ ಬರುವ ಮುನ್ನವೇ ಜನರು ಹೊರಗಿನ ಕೆಲಸವನ್ನೆಲ್ಲ ಮುಗಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಕಾಲಿಟ್ಟರೆ ಸುಡುವ ಸೂರ್ಯನನ್ನು ಹೆದರಿಸಲು ಕೈಯಲ್ಲಿ ಛತ್ರಿ ಹಿಡಿದೆ ಹೊರಬರಬೇಕು ಎಂಬಂತಾಗಿದೆ. ಗರಿಷ್ಠ ತಾಪಮಾನ ಏರಿಕೆಗೆ ಎಲ್ಲ ವಯೋಮಾನದವರು ತತ್ತರಿಸಿ ಹೋಗಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಸಾಮಾನ್ಯಕ್ಕಿಂತ ತಾಪಮಾನ ದುಪ್ಪಟ್ಟು ಆಗಲಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಪಟ್ಟು ಹೆಚ್ಚಾಗಲಿದೆ. ಇನ್ನೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.

ರಾಜಧಾನಿಯಲ್ಲೂ ಬಿಸಿಲ ಧಗೆ

ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಮಧ್ಯಾಹ್ನ ಸಮಯ ಬಿಸಿಲ ಧಗೆ ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Drowned in Pond : ಕೃಷಿ ಹೊಂಡಕ್ಕೆ ಬಿದ್ದು ಮೂವರು ಸಾವು; ದೇವರ ಊಟ ಮಾಡಿ ಕೈ ತೊಳೆಯುವಾಗ ದುರಂತ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 35 ಡಿ.ಸೆ – 21 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Road Accident : ಟೆಂಪೋಗೆ ಸ್ಕೂಟರ್‌ ಡಿಕ್ಕಿ; ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ

Road Accident : ಸ್ಕೂಟ‌ರ್ ಮತ್ತು ಟೆಂಪೋ ಮಧ್ಯೆ ಅಪಘಾತ ಸಂಭವಿಸಿದೆ. ಸ್ಕೂಟರ್‌ ಓಡಿಸುತ್ತಿದ್ದ ಯುವಕ ಮೃತಪಟ್ಟರೆ, ಜತೆಗಿದ್ದ ತಾಯಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Scooter collides with tempo Son dies in front of mother
Koo

ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.

ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್‌ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಅಮ್ಮ-ಮಗ ಸ್ಕೂಟರ್‌ನಲ್ಲಿ ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೆಂಪೋಗೆ ಸ್ಕೂಟರ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅಪಘಾತದಲ್ಲಿ ಗಾಯಗೊಂಡ ಮುಫ್ರೀನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

ಹೊಲದಲ್ಲಿ ನೇಣಿಗೆ ಶರಣಾದ ಕೊಪ್ಪಳದ ರೈತ

ಸಾಲಭಾದೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ಘಟನೆ ನಡೆದಿದೆ. ದ್ಯಾಮ ನಾಯಕ (30) ಮೃತ ದುರ್ದೈವಿ.

ದ್ಯಾಮ ನಾಯಕ ಬ್ಯಾಂಕ್, ಸ್ವ ಸಹಾಯ ಗುಂಪಿನಲ್ಲಿ 40 ಸಾವಿರ ಸಾಲ ಮಾಡಿದ್ದರು. ಸಾಲ ತೀರಿಸಲು ಆಗದೇ ಮನನೊಂದಿದ್ದ. ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕುರಿಗಾಹಿಗೆ ಥಳಿತ

ಸಂಚಾರಿ ಕುರಿಗಾಹಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಹೊನ್ನಪ್ಪ ಕುರಿ ಎನ್ನುವ ಕುರಿಗಾಹಿ ಮೇಲೆ ಕೀರೆಸೂರು ಗ್ರಾಮದ ವೆಂಕಟೇಶ್‌ ಸೋಮನಗೌಡ್ರ ಎಂಬಾತ ಹಲ್ಲೆ ನಡೆಸಿದ್ದಾನೆ. ಹೊಲದಲ್ಲಿ ಕುರಿ ಮೇಯಿಸಿದ ಎಂಬ ಕಾರಣಕ್ಕೆ ಕೋಲಿನಿಂದ ಥಳಿಸಿದ್ದಾನೆ. ಸದ್ಯ ಗಾಯಾಳು ಹೊನ್ನಪ್ಪ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Murder Case : ಒಂಟಿ ಮನೆಯಲ್ಲಿ ಫೈರಿಂಗ್‌ ಸೌಂಡ್‌, ನಿಗೂಢವಾಗಿ ಕೊಲೆ ಮಾಡಿ ಹೋದವರು ಯಾರು?

Murder Case : ಉಡುಪಿ ಜಿಲ್ಲೆಯ ಒಂಟಿ ಮನೆಯಲ್ಲಿ ಶನಿವಾರ ರಾತ್ರಿ ಫೈರಿಂಗ್‌ ಸೌಂಡ್‌ ಕೇಳಿಬಂದಿತ್ತು. ಮರುದಿನ ಮುಂಜಾನೆ ನೋಡಿದರೆ ಅಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿ ಹೆಣವಾಗಿ ಮಲಗಿದ್ದಾರೆ.

VISTARANEWS.COM


on

Murder Case _ Shootout
Koo

ಉಡುಪಿ: ಉಡುಪಿ ಜಿಲ್ಲೆಯ (Udupi News) ಬ್ರಹ್ಮಾವರ ತಾಲೂಕಿನ ಹನೇಹಳ್ಳಿಯಲ್ಲಿ ಶನಿವಾರ ರಾತ್ರಿ ಶೂಟೌಟ್ (Shoot out at Hanehalli) ಪ್ರಕರಣವೊಂದು ನಡೆದಿದೆ. ಒಂಟಿ ಮನೆಯಲ್ಲಿ ಒಬ್ಬ ವ್ಯಕ್ತಿಯನ್ನು ನಿಗೂಢವಾಗಿ ಕೊಲೆ (Murder Case) ಮಾಡಲಾಗಿದೆ.

ಮಣಿಪಾಲದಲ್ಲಿ ಕೆಲಸ ಮಾಡುತ್ತಿರುವ ಕೃಷ್ಣ ಎಂಬವರು ಕೊಲೆಯಾದವರು. ಅವರು ಹನೆಹಳ್ಳಿಯ ಒಂಟಿ ಮನೆಯಲ್ಲಿ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಶನಿವಾರ ರಾತ್ರಿ 9.30ರ ಸುಮಾರಿಗೆ ಈ ಮನೆಯಿಂದ ಗುಂಡಿನ ಸದ್ದು (Firing sound) ಕೇಳಿಬಂದಿತ್ತು. ಅದು ಪ್ರಾಣಿಗಳನ್ನು ಓಡಿಸಲು ಪಟಾಕಿ ಬಿಟ್ಟಿರಬಹುದು ಎಂದು ಆಸುಪಾಸಿನವರು ಸುಮ್ಮನಿದ್ದರು. ಆದರೆ, ಬೆಳಗ್ಗೆ ಹೋಗಿ ನೋಡಿದಾಗ ಕೃಷ್ಣ ಅವರು ರಕ್ತದ ಮಡುವಿನಲ್ಲಿ ಶವವಾಗಿ ಮಲಗಿದ್ದರು.

ಹಾಗಿದ್ದರೆ ರಾತ್ರಿ ಆ ಮನೆಗೆ ಬಂದು ಶೂಟ್‌ ಮಾಡಿ ಕೃಷ್ಣ ಅವರನ್ನು ಸಾಯಿಸಿದ್ದು ಯಾರು ಎನ್ನುವುದು ನಿಗೂಢವಾಗಿದೆ. ಕೃಷ್ಣ ಅವರು ತಾವೇ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಂತೆ ಕಾಣುತ್ತಿಲ್ಲ. ಬದಲಾಗಿ ಯಾರೋ ಬಂದು ಅವರಿಗೆ ಗುಂಡಿಕ್ಕಿದಂತೆ ಕಾಣುತ್ತಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ಭೇಟಿ ನೀಡಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಹನೆಹಳ್ಳಿಯಲ್ಲಿ ನಡೆದ ಘಟನೆ ಘಟನೆ ಇದಾಗಿದ್ದು, ಕೃಷ್ಣ ಅವರ ಹಿನ್ನೆಲೆ, ಅವರನ್ನು ಯಾರು ಕೊಲೆ ಮಾಡಿರಬಹುದು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶೂಟ್ ಔಟ್ ನಡೆಸಿದವರಿಗಾಗಿ ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ಇದನ್ನೂ ಓದಿ : Bengaluru News : ಛೇ.. ಇವಳೆಂಥಾ ತಾಯಿ? ಬುದ್ಧಿ ಕಲಿಸಲು 3 ವರ್ಷದ ಮಗುವನ್ನು ಕೂಡಿಹಾಕಿದ್ದಳಂತೆ!

ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

ಧಾರವಾಡ: ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ (Man kills mother and ends life) ಧಾರವಾಡ ಹೊಸ ಯಲ್ಲಾಪೂರ (Dharwad News) ನಗರದಲ್ಲಿ ನಡೆದ ಘಟನೆ ಇದಾಗಿದೆ. ಹಣಕ್ಕಾಗಿ ಸದಾ ತಾಯಿಯನ್ನು ಪೀಡಿಸುತ್ತಿದ್ದ ಈತ ಇದೀಗ ಆಕೆಯನ್ನೇ ಕೊಂದು ಹಾಕಿದ್ದಾನೆ.

ಶಾರದಾ ಭಜಂತ್ರಿ (60) ಕೊಲೆಯಾದ ದುರ್ದೈವಿ. ರಾಜೇಂದ್ರ ಭಜಂತ್ರಿ (40) ಕೊಲೆ ಮಾಡಿದ ಧೂರ್ತ ಮಗ. ರಾಜೇಂದ್ರ ಭಜಂತ್ರಿ ತನ್ನ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಮತ್ತು ಬಳಿಕ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

Son Kills Mother

ಧೂರ್ತ ಮಗ ರಾಜೇಶ್‌ ಹಣಕ್ಕಾಗಿ ಸದಾ ತನ್ನ ತಾಯಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಸರ್ಕಾರಿ ಉದ್ಯೋಗದಲ್ಲಿದ್ದು ನಿವೃತ್ತರಾಗಿದ್ದ ತಾಯಿಗೆ ಬರುತ್ತಿದ್ದ ಪಿಂಚಣಿಯ ಮೇಲೆ ಆತ ಕಣ್ಣಿಟ್ಟು ಕಾಟ ಕೊಡುತ್ತಿದ್ದ. ಅದರ ಜತೆಗೆ ಜಾಗವನ್ನು ತನ್ನ ಹೆಸರಿಗೆ ಬರೆದುಕೊಡು ಎಂದು ಕೂಡಾ ಬೆನ್ನು ಬಿದ್ದಿದ್ದ ಎನ್ನಲಾಗಿದೆ.

ಆ ಜಾಗ ನನಗೆ ಕೊಡು, ಅಲ್ಲಿ ನಾನೇ ಮನೆ ಕಟ್ಟಿಕೊಳ್ಳುತ್ತೇನೆ ಎಂದು ಆತ ಹೇಳಿದ್ದ. ಆದರೆ ಈ ಜಾಗವನ್ನು ಅವನಿಗೆ ಕೊಟ್ಟರೆ ಅದನ್ನೂ ಮಾರಿ ಹಾಳು ಮಾಡುತ್ತಾನೆ ಎಂಬ ಕಾರಣಕ್ಕಾಗಿ ಅಮ್ಮ ನಿರಾಕರಿಸಿದ್ದರು. ಜಾಗ ಕೊಡಲು ನಿರಾಕರಿಸಿದ್ದಕ್ಕೆ ಅವರಿಬ್ಬರ ನಡುವೆ ಜಗಳವಾಗಿತ್ತು. ಈ ವೇಳೆ ಮಗನೇ ತಾಯಿಯನ್ನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದುಷ್ಟ ಮಗ ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದ ಎಂದು ಹೇಳಲಾಗುತ್ತಿದ್ದು, ಇದು ಪೊಲೀಸ್‌ ಕೇಸ್‌ನಲ್ಲಿ ಕೋರ್ಟ್‌ ವಿಚಾರಣೆ ವೇಳೆ ತಪ್ಪಿಸಿಕೊಳ್ಳುವ ಪ್ರಯತ್ನ ಎಂದು ಕೂಡಾ ಹೇಳಲಾಗುತ್ತಿದೆ.

Continue Reading
Advertisement
Royal Challengers Bangalore Women
ಕ್ರೀಡೆ1 min ago

WPL 2024 Points Table: ಡಬ್ಲ್ಯುಪಿಎಲ್​ನಲ್ಲಿ ಇನ್ನು 9 ಪಂದ್ಯಗಳು ಬಾಕಿ; ಅಂಕಪಟ್ಟಿ ಹೇಗಿದೆ?

exam writing
ಪ್ರಮುಖ ಸುದ್ದಿ29 mins ago

Kar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ

Mohamed Muizzu And Xi Jinping
ದೇಶ30 mins ago

Maldives: ಚೀನಾ ಜತೆ ಒಪ್ಪಂದದ ಬೆನ್ನಲ್ಲೇ ಮಾಲ್ಡೀವ್ಸ್‌ ಉದ್ಧಟತನ;‌ ಭಾರತ ಸೇನೆಗೆ ಡೆಡ್‌ಲೈನ್

Cricket Coach Tushar Arothe
ಕ್ರೀಡೆ34 mins ago

Tushar Arothe: ಭಾರತ ತಂಡದ ಮಾಜಿ ಕೋಚ್ ಮನೆಯಲ್ಲಿ ಕೋಟಿ ರೂ. ಪತ್ತೆ; ವಶಕ್ಕೆ ಪಡೆದ ಪೊಲೀಸರು

Bescom website
ಕರ್ನಾಟಕ36 mins ago

Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ

Shahjahan Sheikh
ದೇಶ43 mins ago

ಲೈಂಗಿಕ ದೌರ್ಜನ್ಯ; ಟಿಎಂಸಿಯ ಶಹಜಹಾನ್‌ನನ್ನು ಸಿಬಿಐಗೆ ವಹಿಸಿ ಎಂದು ಕೋರ್ಟ್‌ ಆದೇಶ

Wife And children leave home to be fear by pigs
ಹಾವೇರಿ1 hour ago

Boar Attack : ಹಂದಿಗಳ ಕಾಟಕ್ಕೆ ಮನೆ ಬಿಟ್ಟು ಹೋದ್ರು ಹೆಂಡ್ತಿ-ಮಕ್ಕಳು!

Rohit Sharma
ಕ್ರೀಡೆ1 hour ago

Rohit Sharma: ಕೆಜಿಎಫ್ ಶೈಲಿಯಂತೆ ಹೆಲಿಕಾಪ್ಟರ್​ನಲ್ಲಿ ಧರ್ಮಶಾಲಾಕ್ಕೆ ಬಂದಿಳಿದ ರೋಹಿತ್​; ವಿಡಿಯೊ ವೈರಲ್​

abhijith
ದೇಶ1 hour ago

Abhijit Gangopadhyay: ರಾಜೀನಾಮೆ ನೀಡಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಅಭಿಜಿತ್‌ ಗಂಗೋಪಾಧ್ಯಾಯ; ರಾಜಕೀಯ ಪ್ರವೇಶ ಸಾಧ್ಯತೆ

JP Nadda BJP
ಚಿಕ್ಕೋಡಿ2 hours ago

JP Nadda : ಪಾಕ್‌ ಬೆಂಬಲಿಗರನ್ನು ಭಾರತ ಮಾತೆ ಕ್ಷಮಿಸಲ್ಲ; ಕಾಂಗ್ರೆಸ್‌ಗೆ ನಡ್ಡಾ ಎಚ್ಚರಿಕೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ23 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌