ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.
ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!
ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ