ಬೆಂಗಳೂರು: ರಾಜ್ಯದಲ್ಲಿಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಮಳೆಗೆ ಗಾಳಿಯು ಸಾಥ್ ನೀಡುತ್ತಿದ್ದು, ರಭಸವಾಗಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ವಿಜಯನಗರ, ಮೈಸೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಮಳೆ-ಗಾಳಿ ಒಟ್ಟೊಟ್ಟಿಗೆ ದಾಳಿ
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ ಹಾಗೂ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಮಾತ್ರವಲ್ಲ ಏಪ್ರಿಲ್ 13 ಮತ್ತು 14ರಂದು ಗಂಟೆಗೆ 40-50 ಕಿ.ಮೀ ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿಯ ವೇಗವು ರಭಸವಾಗಿ ಬೀಸಲಿದೆ ಎಂದು ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಏಪ್ರಿಲ್ 14ರ ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ಮೈಸೂರಿನ ಒಂದೆರಡುಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 3 ದಿನಗಳು ದಕ್ಷಿಣ ಒಳನಾಡಿನಲ್ಲಿ ಗಾಳಿ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಏ.14ರವರೆಗೆ ರಾಜ್ಯದ ಒಂದೆರಡು ಕಡೆಗಳಲ್ಲಿ ಸಿಡಿಲು, ಗುಡುಗು ಕೂಡಿದ ಮಳೆಯಾಗಲಿದೆ
ಇದನ್ನೂ ಓದಿ: Rameshwaram Cafe Blast: ಮೂರು ವರ್ಷದಲ್ಲಿ ಮೂರು ಬ್ಲಾಸ್ಟ್; ಈ ಮೂರಕ್ಕೂ ಶಿವಮೊಗ್ಗ ನಂಟು!
ಮಳೆಗಾಗಿ ಕಾದು ಕುಳಿತ ಬೆಂಗಳೂರಿಗರು
ರಾಜಧಾನಿ ಬೆಂಗಳೂರಲ್ಲಿ ಯಾವಾಗ ಮಳೆಯ ದರ್ಶನವಾಗುತ್ತೋ ಎಂದು ಕಾದು ಕುಳಿತುಕೊಳ್ಳುವಂತಾಗಿದೆ. ಶನಿವಾರ-ಭಾನುವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ತಾಪಮಾನದ ಮುನ್ಸೂಚನೆ
ಇನ್ನೂ ಮಳೆ ನಡುವೆಯೂ ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ.