ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (karnataka Weather Forecast) ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ.
ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕೋಲಾರದಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿ, ರಾಯಚೂರು, ಬೀದರ್, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ
ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕಿಳಿಯುವ ಮುನ್ನ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Assault Case : ಹೋಮ್ ವರ್ಕ್ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ
ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ
ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.
ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.
ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ