Site icon Vistara News

Karnataka Weather : ರಾಜ್ಯದಲ್ಲಿ ಏ.17ರ ವರೆಗೂ ಮಳೆ ಆರ್ಭಟ;‌ ಗುಡುಗು, ಸಿಡಿಲು ಸಾಥ್

Karnataka Weather

ಬೆಂಗಳೂರು: ರಾಜ್ಯಾದ್ಯಂತ ಕೆಲವಡೆ ಗುಡುಗು ಮತ್ತು ಮಿಂಚಿನೊಂದಿಗೆ ಮಧ್ಯಮ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗಾಳಿಯ ವೇಗದ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಮೇಲ್ಮೈ ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ಭಾನುವಾರದಂದು ದಕ್ಷಿಣ ಕನ್ನಡ, ಉಡುಪಿ‌, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ಮೈಸೂರಿನ ಒಂದೆರಡುಗಳಲ್ಲಿ ಹಗುರ ಮಳೆಯಾಗಲಿದೆ.

ಮುಂದಿನ 3 ದಿನಗಳು ದಕ್ಷಿಣ ಒಳನಾಡಿನಲ್ಲಿ ಗಾಳಿ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಏ.14 ರವರೆಗೆ ರಾಜ್ಯದ ಒಂದೆರಡು ಕಡೆಗಳಲ್ಲಿ ಸಿಡಿಲು, ಗುಡುಗು ಕೂಡಿದ ಮಳೆಯಾಗಲಿದೆ.

ಕರಾವಳಿಗೆ ಹೀಟ್‌ ವೇವ್‌ ಶಾಕ್‌

ಏಪ್ರಿಲ್‌ 15 ರಿಂದ 17ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Eating Ice Cream In Summer: ಬೇಸಿಗೆಯಲ್ಲಿ ಐಸ್‌ಕ್ರೀಮ್ ತಿನ್ನುವುದರಿಂದ ಸೆಖೆ ಮತ್ತೂ ಹೆಚ್ಚಾಗುತ್ತದೆ ಗೊತ್ತೆ?

ಏಪ್ರಿಲ್‌ 17ರವರೆಗೆ ಮಳೆ ಸಾಧ್ಯತೆ

ರಾಜ್ಯದಲ್ಲಿ ಏಪ್ರಿಲ್‌ 17ರವರೆಗೆ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್‌ 15ರಂದು ದಕ್ಷಿನ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್ 16 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version