Site icon Vistara News

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

karnataka weather Forecast

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳನಾಡಿನಲ್ಲಿ ಸಾಧಾರಣವಾಗಿದೆ. ಮಂಗಳವಾರ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಧ್ಯಮದಿಂದ (Rain News) ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy rain News) ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ . ರಾಯಚೂರು, ಧಾರವಾಡ ಮತ್ತು ಹಾವೇರಿ, ಗದಗ, ಕೊಪ್ಪಳ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಕೊಡಗು ಸಾಧಾರಣ ಮಳೆಯಾದರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಕೆಲವೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

ಕರಾವಳಿ ರೆಡ್‌ ಅಲರ್ಟ್‌

ಮಂಗಳವಾರ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜು.9ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಆಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಎಲ್ಲಾ ತಾಲೂಕಿನ ಶಾಲಾ-ಕಾಲೇಜಿಗೆ ಜು.9 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version