Site icon Vistara News

Karnataka Weather :‌ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ರಣಮಳೆ ಫಿಕ್ಸ್!

karnataka weather Forecast

ಬೆಂಗಳೂರು: ಜೂ.22ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಸಾಕಷ್ಟು ವ್ಯಾಪಕವಾದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇನ್ನೂ ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಪ್ರತ್ಯೇಕವಾಗಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಐಎಂಡಿ ರೆಡ್ ಹಾಗೂ ಆರೆಂಜ್‌ ಅಲರ್ಟ್ ಘೋಷಿಸಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಕಾರಣಕ್ಕೆ ಜೂನ್‌ 24ರವರೆಗೆ ಮೀನುಗಾರಿಕೆಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lokayukta Raid : ಹಲಸಿನ ಮರ ತೆರವಿಗೂ ಕೊಡಬೇಕು ಗರಿ ಗರಿ ನೋಟು; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಕೋರರು

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಸೀಬೆಕಾಯಿಗೆ ಸಾಮಾನ್ಯವಾಗಿ ಎರಡು ಋತುಗಳಿವೆ. ಅಂದರೆ ವರ್ಷಕ್ಕೆರಡು ಬಾರಿ ಇದು ದೊರೆಯುತ್ತದೆ. ಮಕ್ಕಳಿಂದ ವೃದ್ಧರಾದಿಯಾಗಿ ಕರೆದು ಕೊಟ್ಟರೂ, ಸೀಬೆಯನ್ನು ಕದ್ದು ತಿನ್ನುವುದೇ ಪ್ರಿಯವಾದ್ದರಿಂದ ಹೀಗೆ ಒಂದಕ್ಕಿಂತ ಹೆಚ್ಚಿನ ಬೆಳೆಗಳನ್ನು ಸೃಷ್ಟಿಯೇ ನೀಡಿರಬಹುದು ಇದಕ್ಕೆ. ಎಳೆ ಮಿಡಿ, ಕಾಯಿ, ಹಣ್ಣು ಮುಂತಾದ ಯಾವುದೇ ಭೇದವಿಲ್ಲದೆ ಇದನ್ನು ಖಾಲಿ ಮಾಡುವವರಿದ್ದಾರೆ. ಬಾಯಿ ರುಚಿಗಷ್ಟೇ ಇದನ್ನು ತಿನ್ನುವುದಲ್ಲ, ಸೀಬೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ (Benefits Of Eating Guava) ಪ್ರಯೋಜನಗಳಿವೆ.

ಸತ್ವಗಳು

ಇದರಲ್ಲಿ ವಿಟಮಿನ್‌ ಎ, ಸಿ, ನಾರು ಮತ್ತು ಪೊಟಾಶಿಯಂನಂಥ ಖನಿಜಗಳು ಸಾಕಷ್ಟಿವೆ. ಜೊತೆಗೆ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಇರುವುದರಿಂದ ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳನ್ನು ಒದಗಿಸಬಲ್ಲದು ಈ ಹಣ್ಣು. ಬಿಳಿ ಪೇರಲೆ, ಹಳದಿ ಬಣ್ಣದ್ದು, ಕೆಂಪು ಬಣ್ಣದ್ದು- ಹೀಗೆ ಯಾವುದೇ ಆದರೂ ಅವೆಲ್ಲವೂ ಆರೋಗ್ಯಕ್ಕೆ ಒಳ್ಳೆಯವೇ.

ವಿಟಮಿನ್‌ ಸಿ

ಒಂದು ದೊಡ್ಡ ಸೀಬೆ ಹಣ್ಣಿನಲ್ಲಿ ಎರಡು ಕಿತ್ತಳೆ ಹಣ್ಣುಗಳಲ್ಲಿ ಇರುವಷ್ಟು ಸಿ ಜೀವಸತ್ವ ಇದೆಯೆಂಬುದು ಗೊತ್ತೇ? ಇದರಿಂದ ರೋಗ ನಿರೋಧಕ ಶಕ್ತಿ ಬಲವಾಗುವುದಲ್ಲದೆ, ಕಬ್ಬಿಣದ ಅಂಶ ದೇಹದೊಳಗೆ ಚೆನ್ನಾಗಿ ಹೀರಲ್ಪಡುತ್ತದೆ. ಮಾತ್ರವಲ್ಲ, ಕೊಲಾಜಿನ್‌ ಉತ್ಪಾದನೆ ಹೆಚ್ಚಾಗಿ, ಕೂದಲು ಮತ್ತು ಚರ್ಮದ ಆರೋಗ್ಯವೂ ಸುಧಾರಿಸುತ್ತದೆ.

ಮಧುಮೇಹಿಗಳಿಗೆ ಸೂಕ್ತ

ಇದು ಹಣ್ಣಾದಾಗ ರುಚಿ ಸಿಹಿಯೇ ಇದ್ದರೂ, ಇದರ ಗ್ಲೈಸೆಮಿಕ್‌ ಸೂಚಿ ಕಡಿಮೆ. ಪೇರಲೆಯ ಎಲೆಯ ಕಷಾಯಗಳನ್ನು ಸಕ್ಕರೆ ಕಾಯಿಲೆಯ ನಿಯಂತ್ರಣಕ್ಕೆ ಬಳಸುವ ಪದ್ಧತಿ ಪರಂಪರಾಗತ ಔಷಧಕ್ರಮದಲ್ಲಿ ಇದೆ. ನಾರಿನಂಶ ಹೇರಳವಾಗಿ ಇರುವುದರಿಂದ, ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನೇ ನೀಡುತ್ತದೆ. ಜೊತೆಗೆ, ಗ್ಲೂಕೋಸ್‌ ಅಂಶ ದಿಢೀರನೆ ರಕ್ತ ಸೇರದಂತೆ ತಡೆಯುವ ಗುಣವಿದೆ ಇದಕ್ಕೆ.

ಕ್ಯಾಲರಿ ಕಡಿಮೆ

ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುವ ಈ ಹಣ್ಣಿನಲ್ಲಿ ಕ್ಯಾಲರಿ ಕಡಿಮೆ, ಕೊಬ್ಬು ಬಹುತೇಕ ಇಲ್ಲವೇ ಇಲ್ಲ. ಇದರಲ್ಲಿ ಅಗತ್ಯ ಪ್ರಮಾಣದ ನಾರು ಇರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡಿ, ಕಳ್ಳ ಹಸಿವೆಯನ್ನು ನೀಗಿಸುತ್ತದೆ. ಹೆಚ್ಚು ಕಾಲದವರೆಗೆ ಹಸಿವಾಗದಂತೆ ತಡೆಯುತ್ತದೆ. ಬಾಯಾಡುವುದಕ್ಕೆ ಇನ್ನೇನಿದೆ ಎಂದು ತಡಕುವುದನ್ನು ತಡೆಯುತ್ತದೆ. ಜೊತೆಗೆ, ದೇಹಕ್ಕೆ ಅಗತ್ಯವಾದ ಖನಿಜಗಳು, ವಿಟಮಿನ್‌ ಸಿ ಮತ್ತಿತರ ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಹಾಗಾಗಿ ತೂಕ ಇಳಿಸುವ ಯೋಜನೆಯಿದ್ದರೆ ಪೇರಲೆ ಹಣ್ಣನ್ನು ಸಂತೋಷದಿಂದ ನಿಮ್ಮ ಆಹಾರಯೋಜನೆಯಲ್ಲಿ ಸೇರಿಸಿಕೊಳ್ಳಿ. ಆದರೆ ಇದನ್ನು ಆಹಾರದ ಭಾಗವಾಗಿ ಬಳಸಿಕೊಳ್ಳುವುದು ಹೇಗೆ? ಪೇರಲೆಯನ್ನು ಕಚ್ಚಿ ತಿನ್ನುವುದು ಮಾತ್ರವೇ ಎಲ್ಲರಿಗೂ ಪರಿಚಿತವಾದದ್ದು. ಹೀಗೆ ಎಷ್ಟು ತಿನ್ನಲು ಸಾಧ್ಯ? ದಿನವೂ ಅದನ್ನೇ ಮಾಡಿದರೆ ಬೋರಾಗುವುದಿಲ್ಲವೇ? ಇಲ್ಲಿದೆ ಪರಿಹಾರ.

ಸೀಬೆ ಸ್ಮೂದಿ

ತೂಕ ಇಳಿಸುವವರಿಗೆ ಸ್ಮೂದಿ ಉತ್ತಮ ಆಹಾರ. ಯಾವುದೇ ಹಣ್ಣುಗಳನ್ನು ಇಡಿಯಾಗಿ ಅಥವಾ ಉಳಿದೆಲ್ಲ ಹಣ್ಣುಗಳ ಜೊತೆಯಾಗಿ ಹಾಕಿ ಸ್ಮೂದಿ ಮಾಡಿಕೊಳ್ಳಬಹುದು. ಇದಕ್ಕೆ ಪೇರಲೆಯನ್ನೂ ಸೇರಿಸಿದರೆ ಉತ್ತಮ. ಇದು ಸ್ಮೂದಿಯ ರುಚಿ ಮತ್ತು ಘಮವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಪೌಷ್ಟಿಕಾಂಶವನ್ನೂ ಹೆಚ್ಚಿಸುತ್ತದೆ. ಬಾಳೆಹಣ್ಣು, ಬೆರ್ರಿಗಳು ಮುಂತಾದ ನಿಮ್ಮ ಆಯ್ಕೆಯ ಹಣ್ಣುಗಳ ಜೊತೆಗೆ ಸೀಬೆಯನ್ನೂ ಸೇರಿಸಿ. ಜೊತೆಗೆ ಹಾಲು ಅಥವಾ ಮೊಸರು- ಯಾವುದು ಸರಿ ಹೊಂದುತ್ತದೆ ಎಂಬುದೂ ನಿಮ್ಮದೇ ಆಯ್ಕೆ. ಇದರ ಮೇಲೆ ಚಿಯಾ, ಅಗಸೆ ಮುಂತಾದ ಬೀಜಗಳನ್ನು ಉದುರಿಸಿದರೆ ಸತ್ವಯುತ ಸ್ಮೂದಿ ಸಿದ್ಧ.

ಸೀಬೆ ಸಲಾಡ್

ತೂಕ ಇಳಿಸುವವರಿಗೆ ಸಲಾಡ್‌ ಇಲ್ಲದೆ ಮುಂದೆ ಹೋಗುವುದೇ ಇಲ್ಲ. ಕಡಿಮೆ ಕೊಬ್ಬಿರುವ ಅಗತ್ಯ ಸತ್ವಗಳನ್ನು ಹೊಂದಿರುವ ಸಲಾಡ್‌ಗಳು ದೇಹಕ್ಕೆ ಚೈತನ್ಯ ನೀಡುವುದರ ಜೊತೆಗೆ ಕೊಬ್ಬು ಕರಗಿಸಲು ನೆರವಾಗುತ್ತವೆ. ಇಂಥ ಯಾವುದೇ ಸಲಾಡ್‌ಗೂ ಪೇರಲೆಯನ್ನು ಸೇರಿಸಬಹುದು. ತರಕಾರಿ ಸಲಾಡ್‌, ಹಣ್ಣುಗಳ ಸಲಾಡ್‌ ಎರಡಕ್ಕೂ ಪೇರಲೆಯ ರುಚಿ ಮತ್ತು ಪರಿಮಳ ಹೊಂದಿಕೊಳ್ಳುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version