ಬೆಂಗಳೂರು: ಕರ್ನಾಟಕ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿಂದು ಭಾರೀ ಮಳೆ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬಳ್ಳಾರಿ, ಧಾರವಾಡ, ಕೊಪ್ಪಳ, ಹಾವೇರಿ, ವಿಜಯನಗರ, ಬಾಗಲಕೋಟೆ, ರಾಯಚೂರು ಮತ್ತು ಗದಗದಲ್ಲಿ ಭರ್ಜರಿ ಮಳೆಯಾಗಲಿದೆ. ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ಇದನ್ನೂ ಓದಿ:Murder Case : ಪುತ್ತೂರಿನ ಹುಲಿವೇಷ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ; ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ
ಭಾರಿ ಮಳೆ ಎಚ್ಚರಿಕೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ ಮತ್ತು ರಾಮನಗರದಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಯಲಹಂಕದಲ್ಲಿ ಅತಿ ಹೆಚ್ಚು ಮಳೆ
ರಾಜಧಾನಿ ಬೆಂಗಳೂರಲ್ಲಿ ಸೋಮವಾರ ರಾತ್ರಿ ಪೂರ್ತಿ ಭಾರಿ ಮಳೆಯಾಗಿದೆ. ಭಾರಿ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಯಲಹಂಕದಲ್ಲಿ 14.7 ಸೆಂ.ಮೀ ಅತಿಹೆಚ್ಚು ಮಳೆ ದಾಖಲಾಗಿದೆ. ಕೋಗಿಲು ಕ್ರಾಸ್‌ನ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಮಳೆ ನೀರು ಜಲಾವೃತಗೊಂಡಿತ್ತು. ಸುಮಾರು ಒಂದು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು.
ಎಲ್ಲೆಲ್ಲಿ ಎಷ್ಟು ಮಳೆ?
ಯಲಹಂಕ -14.7ಸೆಂಮಿ
ಹಂಪಿನಗರ 9.4ಸೆಂಮಿ
ನಾಗಪುರ (ವೆಸ್ಟ್ ಜೋನ್ ) 8.95ಸೆಂಮಿ
ಜಕ್ಕೂರು- 8.65ಸೆಂಮಿ
ನಂದಿನಿ ಲೇಔಟ್ -8.55
ವಿಶ್ವನಾಥ್ ನಾಗೇನಹಳ್ಳಿ (ಈಸ್ಡ್ ಜೋನ್) -7.5ಸೆಂಮಿ
ರಾಜ್ ಮಹಲ್ ಗುಟ್ಟಳ್ಳಿ -7.6
ಗಾಳಿ ಆಂಜನೇಯ ಟೆಂಪಲ್ -7.5ಸೆಂಮಿ
ಕೊಟ್ಟಿಗೆಪಾಳ್ಯ -7ಸೆಂಮಿ
ಕಮ್ಮನಹಳ್ಳಿ (ಈಸ್ಟ್ ಜೋನ್)-6.95
ಮಾರುತಿ ಮಂದಿರ ವಾರ್ಡ್ -6.8ಸೆಂಮಿ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ -6.75ಸೆಂಮಿ
ಅಗ್ರಹಾರ ದಾಸರಹಳ್ಳಿ -6.7
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ -20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 20 ಡಿ.ಸೆ
ಗದಗ: 29ಡಿ.ಸೆ – 22 ಡಿ.ಸೆ
ಹೊನ್ನಾವರ: 33 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ