ಚಿಕ್ಕಮಗಳೂರು/ಯಾದಗಿರಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ (Karnataka Weather Forecast) ಅಬ್ಬರ ಮುಂದುವರಿದಿದೆ. ಭಾರೀ ಮಳೆಗೆ (Rain news) ದಾರಿ ಕಾಣದೆ ಚಾಲಕರ ನಿಯಂತ್ರಣ ತಪ್ಪಿ 2 ಪ್ರತ್ಯೇಕ ಅಪಘಾತ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ಬರಿಗೆ, ನಜರತ್ ಸ್ಕೂಲ್ ಬಳಿ ಘಟನೆ ನಡೆದಿದೆ.
ಪೌಲ್ಸ್ ಎಂಬುವರ ಮನೆಗೆ ಕಾರೊಂದು ಗುದ್ದಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಮೇಲಿಂದ ಮೇಲೆ ಅಪಘಾತ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ. ಒಂದೇ ಜಾಗದಲ್ಲಿ ವರ್ಷದಲ್ಲಿ 60ಕ್ಕೂ ಹೆಚ್ಚು ಅಪಘಾತ ಸಂಭವಿಸಿದೆ. ಮೇಲಿಂದ ಮೇಲೆ ಅನಾಹುತವಾದರೂ ಅಧಿಕಾರಿಗಳ ಮೌನಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಕೂಡಲೇ ರಸ್ತೆ ಕಾಮಗಾರಿಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಹಾಕಿದ್ದರೂ ಅದಕ್ಕೆ ಗುದ್ದಿ ವಾಹನಗಳಿಂದ ಅಪಘಾತವಾಗುತ್ತಿದೆ ಎಂದಿದ್ದಾರೆ. ಸದ್ಯ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿಯಲ್ಲೂ ಭಾರಿ ಮಳೆ
ಯಾದಗಿರಿಯಲ್ಲಿ ಮಂಗಳವಾರ ಸಂಜೆ ಭಾರಿ ಮಳೆ ಸುರಿದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಯಾದಗಿರಿ ನಗರ, ವಡಗೇರಾ ಸೇರಿದಂತೆ ವಿವಿಧೆಡೆ ಮಳೆ ಅಬ್ಬರ ಜೋರಾಗಿತ್ತು. ಮಳೆ ಅಬ್ಬರಕ್ಕೆ ಊರಿಗೆ ತೆರಳಲು ಜನರ ಸಂಕಷ್ಟ ಎದುರಿಸುತ್ತಿದ್ದಾರೆ.
ಇದನ್ನೂ ಓದಿ: Dalit Protest: ಸರ್ಕಾರದ ವಿರುದ್ಧ ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ ಆಂದೋಲನಕ್ಕೆ ಕರೆ
ಭಾರಿ ಮಳೆಯೊಂದಿಗೆ 50 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ
ಆಗಸ್ಟ್ 28ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಗಾಳಿಯ ವೇಗ 30-40ಕಿ.ಮೀ ಬೀಸಲಿದ್ದು, ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ಮತ್ತು ನಿರಂತರ ಗಾಳಿಯ ವೇಗ (40-50 kmph) ತಲುಪುವ ಸಾಧ್ಯತೆಯಿದೆ.ಉತ್ತರ ಒಳನಾಡಿನಲ್ಲಿ ಲಘುವಾಗಿ ಮಧ್ಯಮ ಮಳೆಯಾದರೆ ಗಾಳಿಯ ವೇಗ 40-50 ಕಿ.ಮೀ ಸಂಭವಿಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ