Site icon Vistara News

Karnataka Weather: ಇಂದು ಕೊಡಗು, ಬೆಳಗಾವಿ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಆ.1ರಂದು ಗುರುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಅಲ್ಲದೇ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಭದ್ರಾ ನದಿಯು ಕೂಡ ಅತಿ ಹೆಚ್ಚು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರು ಅಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆವಹಿಸಿ, ಮುಂಜಾಗ್ರತೆಯಿಂದ ಸುರಕ್ಷಿತ ಸ್ಥಳಗಳಿಗೆ ಹೋಗಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮನವಿ ಮಾಡಿದೆ.

ಆ.2ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ ಆ.3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆ.5ರಂದು ಇದೇ ರೀತಿಯ ಹವಾಮಾನ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಆ. 6ರಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ | Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ. ನಿಂದ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20-C ಆಗಿರಬಹುದು.

Exit mobile version