Site icon Vistara News

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

karnataka weather Forecast

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version