Site icon Vistara News

Karnataka Weather : ಬೆಂಗಳೂರಿನ ಹಲವೆಡೆ ತಂಪೆರೆದ ವರುಣ; ಇನ್ನೆರಡು ದಿನ ಭಾರಿ ಮಳೆ!

Bengaluru rain

ಬೆಂಗಳೂರು: ಕಳೆದೊಂದು ವಾರದಿಂದ ಗರಿಷ್ಠ ತಾಪಮಾನ ಏರಿಕೆಯಿಂದಾಗಿ ಜನರು ಕಂಗಲಾಗಿದ್ದರು. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಭಾನುವಾರದಂದು ಹಲವೆಡೆ ಮಳೆಯ (Rain News) ಸಿಂಚನವಾಗಿದೆ. ಬೆಂಗಳೂರಿನ ಸದಾಶಿವನಗರ, ಯಶವಂತಪುರ, ಗೊರಗುಂಟೆ ಪಾಳ್ಯ, ಮಲ್ಲೇಶ್ವರಂ, ಮಹಾಲಕ್ಷ್ಮೀ ಲೇಔಟ್ ತುಮಕೂರು ರಸ್ತೆ ಸುತ್ತಮುತ್ತ (Karnataka Weather Forecast) ಮಳೆಯಾಗಿದೆ.

ಬೆಂಗಳೂರಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಸಂಜೆಯ ದಿಢೀರ್‌ ಮಳೆಯು ಕೊಂಚ ಕಿರಿಕಿರಿಯುನ್ನುಂಟು ಮಾಡಿದೆ. ಕೆಲ ಬೈಕ್‌ ಸವಾರರು ಮಳೆಗೆ ಬಸ್‌ ನಿಲ್ದಾಣದ ಆಶ್ರಯವನ್ನು ಪಡೆದಿದ್ದರು. ರಾತ್ರಿ ವೇಳೆ ಮಳೆಯು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Road Accident : ಅತಿಥಿ ಶಿಕ್ಷಕನ ಪ್ರಾಣ ತೆಗೆದ ಲಾರಿ!

ದಕ್ಷಿಣ ಒಳನಾಡಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಚಾಮರಾಜನಗರ ದಾವಣಗೆರೆಯ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಹಾವೇರಿ, ವಿಜಯನಗರ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಕೆಲವೊಮ್ಮೆ ಭಾರಿ ಮಳೆ ಸೂಚನೆ ಇದ್ದು, ಉತ್ತರ ಕನ್ನಡ, ಉಡುಪಿಯಲ್ಲಿ ತಕ್ಕಮಟ್ಟಿಗೆ ಮಳೆ ಸುರಿಯಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version