ಉಡುಪಿ/ಮೈಸೂರು: ರಾಜ್ಯದ ವಿವಿಧೆಡೆ ಭಾನುವಾರ ಗುಡುಗು- ಮಿಂಚು, ಗಾಳಿ ಸಹಿತ (Karnataka Weather) ಮಳೆಯಾಗಿದೆ. ಉಡುಪಿಯಲ್ಲಿ ನಿನ್ನೆ ಸಿಡಿಲು ಬಡಿದು ಯುವಕನೊರ್ವ ಮೃತಪಟ್ಟಿದ್ದಾನೆ. ಬ್ರಹ್ಮಾವರ ತಾಲೂಕಿನ ಮಂದಾರ್ತಿ ಆವರ್ಸೆ ಬಳಿ ಪ್ರಮೋದ್ ಶೆಟ್ಟಿ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.
ಪ್ರಮೋದ್ ಹೊರಗೆ ಇದ್ದಾಗ ಒಮ್ಮೆಲೆ ಭಾರಿ ಮಳೆ ಶುರುವಾಗಿದೆ. ಹೀಗಾಗಿ ಮರದಡಿ ಆಸರೆ ಪಡೆದಿದ್ದ. ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಒಮ್ಮೆಲೆ ಪ್ರಮೋದ್‌ಗೆ ಸಿಡಿಲು ಬಡಿದಿದೆ. ಗಂಭೀರ ಗಾಯಗೊಂಡಿದ್ದ ಪ್ರಮೋದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಬಿರು ಮಳೆಗೆ ಬಾಳೆಗೆ ಹಾನಿ
ಮೈಸೂರಿನ ಹುಣಸೂರು ತಾಲೂಕಿನ ಬಿ ಆರ್ ಕಾವಲು ಗ್ರಾಮದಲ್ಲೂ ಬಿರುಗಾಳಿ ಮಳೆಗೆ ಬಾಳೆ ಬೆಳೆ ಹಾನಿಯಾಗಿದೆ. ಭಾನುವಾರ ರಾತ್ರಿ ಬೀಸಿದ ಬಿರುಗಾಳಿ ಮಳೆಗೆ ಬಿ.ಆರ್.ಕಾವಲು ಗ್ರಾಮದ ಚಿನ್ನಸ್ವಾಮಿ ಅವರಿಗೆ ಸೇರಿದ ಎರಡು ಎಕರೆ, ಪ್ರಕಾಶ್ ಅವರ ಒಂದು ಎಕರೆ ಬಾಳೆಬೆಳೆ ಸಂಪೂರ್ಣ ನಾಶವಾಗಿದೆ. ವರ್ಷವಿಡಿ ದುಡಿದು ಬೆಳೆದ ಬೆಳೆ ಒಂದೇ ರಾತ್ರಿಯಲ್ಲಿ ನೆಲಸಮವಾಯ್ತು ಎಂದು ಅಸಮಾಧಾನ ಹೊರಹಾಕಿದರು. ಮಳೆ ಬಂದರೂ ಕಷ್ಟ, ಬಾರದೆ ಇದ್ದರೂ ನಷ್ಟ ಎಂಬಂತಾಗಿದೆ ಎಂದರು.
ಇದನ್ನೂ ಓದಿ: Physical Abuse : ಮಾಲ್‌ನಲ್ಲಿ ಯುವತಿಗೆ ಡಿಕ್ಕಿ ಹೊಡೆದು ಹಿಂಭಾಗ ಮುಟ್ಟಿ ಎಸ್ಕೇಪ್ ಆದ ಕಾಮುಕ!
ಬೆಂಗಳೂರು ಟು ಮೈಸೂರು ಮಳೆ ಅಲರ್ಟ್; ಗುಡುಗು, ಮಿಂಚು ಸಾಥ್
ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Rain News) ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿ, ದಕ್ಷಿಣ ಒಳನಾಡಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಚಾಮರಾಜನಗರ ದಾವಣಗೆರೆ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಹಾವೇರಿ, ವಿಜಯನಗರ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ ಚದುರಿದಂತೆ ಮಳೆ ಸುರಿಯಬಹುದು.
ಭಾರಿ ಮಳೆ ಸಾಧ್ಯತೆ
ಮಲೆನಾಡಿನ ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಕೆಲವೊಮ್ಮೆ ಭಾರಿ ಮಳೆ ಸೂಚನೆ ಇದ್ದು, ಉತ್ತರ ಕನ್ನಡ, ಉಡುಪಿಯಲ್ಲಿ ತಕ್ಕಮಟ್ಟಿಗೆ ಮಳೆ ಸುರಿಯಲಿದೆ.
ಇದನ್ನೂ ಓದಿ: BBK Season 10: ಭಾಗ್ಯಶ್ರೀ, ಸಿರಿ ಜತೆ ತುಕಾಲಿ ಸಂತು ಲಾಕ್; ಯಾರು ಬೇಡವಾಗಿದ್ರೋ ಅವರೇ ಗತಿ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 21 ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 19 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ