Site icon Vistara News

Karnataka Weather : ಗೌರಿ-ಗಣೇಶ ಹಬ್ಬಕ್ಕೆ ಮಳೆ ಅಡ್ಡಿ!ನಿರಂತರ ಗಾಳಿ ಜತೆಗೆ ಭಾರಿ‌ ವರ್ಷಧಾರೆ ಎಚ್ಚರಿಕೆ

Karnataka Weather Forecast

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ (Karnataka Weather forecast) ದುರ್ಬಲವಾಗಿದೆ. ಗುರುವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಗೌರಿ-ಗಣೇಶ ಹಬ್ಬಕ್ಕೆ ಮಳೆಯಾಟ

ಸೆ.6-7ರಂದು ಗೌರಿ -ಗಣೇಶ ಹಬ್ಬದಂದು ಮಳೆಯು ಅಬ್ಬರಿಸಲಿದೆ. ಶುಕ್ರವಾರದಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Heavy rains likely for Gauri-Ganesh festival

ಶನಿವಾರದಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಹೋದ ಬ್ಯಾಂಕ್ ಉದ್ಯೋಗಿ

ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳದ ನೀರಿನ ರಭಸಕ್ಕೆ ಬ್ಯಾಂಕ್ ಉದ್ಯೋಗಿಯೊಬ್ಬರು ಕೊಚ್ಚಿಹೋಗಿದ್ದರು. ರಾಯಚೂರು ತಾಲೂಕಿನ ಫತ್ತೇಪೂರ ಬಳಿ ಗೋಕುಲಸಾಬ್ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆಯೂ ನಡೆದಿದೆ. ಜಾಗೀರ ವೆಂಕಟಾಪುರ ಗ್ರಾಮದ ಬಸವರಾಜ್ (33) ನೀರುಪಾಲದವರು.

ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ಬಸವರಾಜ್‌ ಕೆಲಸ ಮುಗಿಸಿ ರಾತ್ರಿ ಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಉಕ್ಕಿ ಹರಿಯುತ್ತಿದ್ದ ಹಳ್ಳದಾಟಿ ಊರಿಗೆ ಹೋಗಲು ಯತ್ನಿಸುತ್ತಿದ್ದಾಗ ಕೊಚ್ಚಿಹೋಗಿದ್ದಾರೆ. ಹಳ್ಳದ ದಂಡೆಯಲ್ಲೇ ಬೈಕ್ ಇಟ್ಟು ಹಳ್ಳದ ಸೇತುವೆ ದಾಟುತ್ತಿದ್ದ ಈ ಘಟನೆ ನಡೆದಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version