ಬೆಂಗಳೂರು: ಜುಲೈ 4ರಂದು (ಗುರುವಾರ) ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ (Rain Fall) ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 6ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Monsoon Rain Boots Fashion: ಮಕ್ಕಳ ಮಾನ್ಸೂನ್ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್ ಬೂಟ್ಸ್
ವಿರಾಜಪೇಟೆ ತಾಲೂಕಿನಲ್ಲಿ ಕುಸಿದ ಕಾಂಕ್ರೀಟ್ ರಸ್ತೆ
ಕೊಡಗು: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರದಿಂದ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಪುತ್ತಮಕ್ಕಿ ಸ್ಕೂಲ್ ಸಮೀಪ ಕಾಂಕ್ರೀಟ್ ರಸ್ತೆ ಕುಸಿದ ಘಟನೆ ಬುಧವಾರ ನಡೆದಿದೆ. ಕಳೆದ ನಾಲ್ಕು ವರ್ಷದ ಹಿಂದೆ ಕಾಮಗಾರಿ ನಡೆದಿತ್ತು. ವಿರಾಜಪೇಟೆ ತೆರ್ಮೆಮೊಟ್ಟೆ ಮೂಲಕ ತೋರಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಕಳೆದ 5 ವರ್ಷದ ಹಿಂದೆ ತೋರದ ಬಳಿ ಭಾರಿ ಕುಸಿತವಾಗಿದ್ದ ಸ್ಥಳದಿಂದ 8 ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ.
ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ ನಾಲ್ವರ ರಕ್ಷಣೆ
ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ. ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ.
ಚಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ. ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ಆಲದ ಮರ; ಮನೆಯಲ್ಲಿದ್ದವರು ಪಾರು
ಉಡುಪಿ: ಬಿರುಗಾಳಿ ಸಹಿತ ಭಾರಿ ಮಳೆಗೆ ನಗರದ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಆಲದ ಮರ ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ವಸಂತಿ ಶೆಟ್ಟಿ, ಮಗಳು, ಮೊಮ್ಮಕ್ಕಳು ಮನೆಯಲ್ಲಿದ್ದರು.
Rainy Season Tourism: ಮಳೆಗಾಲದ ಪ್ರವಾಸ ಮಾಡುವ ಮುನ್ನ ಈ 10 ಎಚ್ಚರಿಕೆಗಳನ್ನು ಪಾಲಿಸಿ
ಮರ ಬಿದ್ದಿದ್ದರಿಂದ ಮನೆಯ ಎರಡು ಕೊಠಡಿಗಳ ಮೇಲ್ಚಾವಣಿ ಕುಸಿದು ಬಿದ್ದಿದೆ. ಮನೆಯ ಸದಸ್ಯರು ಬೇರೆ ಕೋಣೆಯಲ್ಲಿ ಮಲಗಿದ್ದರು, ಇದರಿಂದ ಅಪಾಯ ತಪ್ಪಿದೆ. ಅವಘಡದಿಂದ ಸೈಕಲ್ ಶಾಪ್, ಜನಪ್ರಿಯ ಸೌಂಡ್ಸ್, ಸಲೂನ್‌ಗೆ ಹಾನಿಯಾಗಿದೆ.