ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಬಹಳಷ್ಟು (Karnataka Weather Forecast ) ಸಾಧ್ಯತೆ ಇದೆ.
ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ
ನ.8ರಂದು ಕರಾವಳಿಯ ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸಲಿದೆ. ಉತ್ತರ ಒಳನಾಡಿನ ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Rain News : ಸೇತುವೆ ದಾಟುವಾಗ ಕೊಚ್ಚಿ ಹೋದ ಶಿಕ್ಷಕ! ಗೋಡೆ ಕುಸಿದು ವೃದ್ಧ ಸಾವು
ಗುಡುಗು ಮುನ್ನೆಚ್ಚರಿಕೆ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಂದು ಕಡೆ ಮಳೆ ಅಬ್ಬರ ಇದ್ದರೂ, ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Bengaluru Rain : ಅಬ್ಬಾ.. ಬೆಂಗಳೂರಲ್ಲಿ ಏನ್ ಮಳೆ ರೀ; ನೀರಲ್ಲಿ ತೇಲಿ ಬಂದ ಗನ್‌ಗಳು!
ರಾಜ್ಯದಲ್ಲಿ ಸೋಮವಾರ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 11, ಕೊನೇಹಳ್ಳಿ ಕೆವಿಕೆ 10, ಹೆಬ್ಬೂರು, ಕೃಷ್ಣರಾಜಪೇಟೆ ತಲಾ 9 ಸೆಂ.ಮೀ ಹಾಗೂ ಹಾವೇರಿ ಎಪಿಎಂಸಿ, ಮಿಡಿಗೇಶಿ, ರಾಮನಗರ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ನಲ್ಲಿ ತಲಾ 8, ರೋಣ, ಸರಗೂರು, ಬೆಂಗಳೂರು ನಗರ, ಚಂದೂರಾಯನಹಳ್ಳಿ ಕೆವಿಕೆಯಲ್ಲಿ ತಲಾ 7 ಸೆಂ.ಮೀ ಭಾರಿ ಮಳೆ ದಾಖಲಾಗಿದೆ. ಕಡಿಮೆ ಉಷ್ಣಾಂಶ 19.5 ಡಿ.ಸೆ. ದಾವಣಗೆರೆಯಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ