Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌ - Vistara News

ಮಳೆ

Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ಭಾರಿ ಮಳೆಯಾಗುವ (Heavy Rain alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ್‌ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರ

ಬೆಂಗಳೂರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

Heavy Rain: ಬೆಂಗಳೂರಿನಲ್ಲಿ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.

VISTARANEWS.COM


on

Heavy Rain
Koo

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ (Heavy Rain).

ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ.

ಮ್ಯಾನ್ ಹೋಲ್‌ಗೆ ಬಿದ್ದ ಕಾರುಗಳು

ಸಿಲ್ಕ್ ಬೋರ್ಡ್ ಸಿಗ್ನಲ್ ಬಳಿ ಭಾರಿ ಮಳೆಯಿಂದ ತೆರೆದುಕೊಂಡಿದ್ದ ಮ್ಯಾನ್‌ಹೋಲ್‌ಗೆ ಎರಡು ಕಾರುಗಳು ಬಿದ್ದಿದ್ದು, ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದೆ. ಕಾರಿನಲ್ಲಿ ಇರಬ್ಬರನ್ನು ರಕ್ಷಿಸಲಾಗಿದೆ.

ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಡಿದರು. ನೀರಿನಲ್ಲಿ ಆ್ಯಂಬುಲೆನ್ಸ್, ವ್ಯಾನ್, ಆಟೋ ಸಿಲುಕಿ ಹಾಕಿಕೊಂಡಿತ್ತು. ದಿಢೀರ್ ‌ಮಳೆಯಿಂದಾಗಿ‌ ನಗರದ ಬಹುತೇಕ ರಸ್ತೆಗಳು ಕೆರೆಯಾಗಿ ಪರಿವರ್ತನೆಯಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ‌ಮುಂಭಾಗದ ರಸ್ತೆ ‌ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದ್ದು, ಸುಮಾರು ‌ಎರಡು ಅಡಿಯಷ್ಟು ನೀರು ನಿಂತಿದೆ. ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಲ ದಿಗ್ಬಂಧನ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ನೀರು ತುಂಬಿ ದಿಗ್ಬಂಧನ ಪರಿಸ್ಥಿತಿ ಏರ್ಪಟ್ಟಿದೆ. ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೇ ಪೇಟೆ, ಕಾಟನ್ ಪೇಟೆ ರಸ್ತೆ ಸಂಪೂರ್ಣ ಜಾಲವೃತವಾಗಿದೆ. ಸುಲ್ತಾನ್ ಪೇಟೆ ಮುಖ್ಯ ರಸ್ತೆ ಸಂಪೂರ್ಣ ರಸ್ತೆ ಬಂದ್ ಆಗಿದ್ದು, ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ. ಪುಲಕೇಶಿ‌ ನಗರದ ಎನ್.ಸಿ. ಕಾಲೋನಿಯಲ್ಲಿ ಮನೆಗಳು ಜಲಾವೃತಗೊಂಡಿವೆ. ಮೂವತ್ತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ.

ಮಾರತಹಳ್ಳಿ ಬಳಿ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ನ ಗೋಡೆ ಒಡೆದಿದ್ದು, ಕೂದಲೆಳೆಯ ಅಂತರದಲ್ಲಿ‌ ಮನೆ ಮಂದಿ ಪಾರಾಗಿದ್ದಾರೆ. ಇತ್ತ ಕೆ.ಆರ್​.ಮಾರ್ಕೆಟ್​ನ ರಸ್ತೆಗಳೂ ಕೆಸರಿನಿಂದ ಕೂಡಿದ್ದು, ವ್ಯಾಪಾರ ವಹಿವಾಟಿಗೆ ತೊಂದರೆ ಎದುರಾಗಿದೆ.

ಭಾರಿ ಮಳೆಯ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಮೈಸೂರು ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಗುಡುಗು ಸಹಿತ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Continue Reading

ದೇಶ

Panjab Flood: ಪಂಜಾಬ್‌ನಲ್ಲೂ ಪ್ರವಾಹ ಸ್ಥಿತಿ; ಒಂದೇ ಕುಟುಂಬದ 8 ಮಂದಿ ಸೇರಿ 9 ಜನ ನೀರುಪಾಲು

Panjab Flood: ಜೈಜೋನ್ ಚೋ ನದಿ ಉಕ್ಕಿ ಹರಿದಿದ್ದು, ಪ್ರವಾಹಕ್ಕೆ ಅನೇಕ ವಾಹನಗಳು ಕೊಚ್ಚಿ ಹೋಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಹಿಲ್‌ಪುರ್ ಬ್ಲಾಕ್‌ನಲ್ಲಿ SUV ವಾಹನ ನದಿಯಲ್ಲಿ ಕೊಚ್ಚಿಹೋಗಿದೆ. ಪಂಜಾಬ್‌ನ ಹಲವಾರು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದೆ.

VISTARANEWS.COM


on

Panjab Flood
Koo

ಚಂಡೀಗಡ: ಪಂಜಾಬ್‌ನಲ್ಲಿ ಭಾರೀ ಮಳೆ(Heavy Rainfall)ಗೆ ಪ್ರವಾಹ(Panjab Flood) ಸ್ಥಿತಿ ನಿರ್ಮಾಣವಾಗಿದ್ದು, ಹಿಮಾಚಲ ಪ್ರದೇಶದ ಒಂದೇ ಕುಟುಂಬದ ಎಂಟು ಜನ ಸೇರಿದಂತೆ ಒಂಬತ್ತು ಮಂದಿ ಕೊಚ್ಚಿ ಹೋಗಿದ್ದಾರೆ. ಇನ್ನು ದುರ್ಘಟನೆಯಲ್ಲಿ ಇಬ್ಬರು ಕಣ್ಮರೆಯಾಗಿದ್ದಾರೆ. ಜೈಜೋನ್ ಚೋ ನದಿ ಉಕ್ಕಿ ಹರಿದಿದ್ದು, ಪ್ರವಾಹಕ್ಕೆ ಅನೇಕ ವಾಹನಗಳು ಕೊಚ್ಚಿ ಹೋಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಹಿಲ್‌ಪುರ್ ಬ್ಲಾಕ್‌ನಲ್ಲಿ SUV ವಾಹನ ನದಿಯಲ್ಲಿ ಕೊಚ್ಚಿಹೋಗಿದೆ. ಪಂಜಾಬ್‌ನ ಹಲವಾರು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದೆ.

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಮೆಹತ್‌ಪುರ ಬಳಿಯ ಡೆಹ್ರಾದಿಂದ ಪಂಜಾಬ್‌ನ ಎಸ್‌ಬಿಎಸ್ ನಗರ ಜಿಲ್ಲೆಯ ಮೆಹ್ರೋವಾಲ್ ಗ್ರಾಮಕ್ಕೆ ಮದುವೆಗೆ ಹಾಜರಾಗಲು ಚಾಲಕನ ಸಮೇತ ಕುಟುಂಬದ 11 ಸದಸ್ಯರು ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

10 ವರ್ಷದ ಮಗುವನ್ನು ಸ್ಥಳೀಯ ಗ್ರಾಮಸ್ಥರು ರಕ್ಷಿಸಿದ್ದಾರೆ. ಪಂಜಾಬ್‌ನ ನವನ್‌ಶಹರ್‌ನಲ್ಲಿ ನಡೆದ ಮದುವೆಯಲ್ಲಿ ಪಾಲ್ಗೊಂಡು 11 ಮಂದಿ ಎಸ್‌ಯುವಿಯಲ್ಲಿ ಪ್ರಯಾಣಿಸಿ ತಮ್ಮ ನಿವಾಸಕ್ಕೆ ಮರಳುತ್ತಿದ್ದರು. ಪೋಲೀಸರ ಪ್ರಕಾರ, ಕುಟುಂಬವು ಮದುವೆ ಮುಗಿಸಿಕೊಂಡು ವಿಹಾರಕ್ಕೆ ಹೋಗುತ್ತಿದ್ದಾಗ ಪ್ರವಾಹದ ನೀರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಎನ್ನಲಾಗಿದೆ. ಇನ್ನು ಮೃತರನ್ನು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಮೆಹತ್‌ಪುರ ಸಮೀಪದ ಡೆಹ್ಲಾನ್ ಗ್ರಾಮದ ನಿವಾಸಿ ದೀಪಕ್ ಭಾಟಿಯಾ ಎಂದು ಗುರುತಿಸಲಾಗಿದ್ದು, ಅವರ ತಂದೆ ಸುರ್ಜಿತ್ ಭಾಟಿಯಾ, ತಾಯಿ ಪರಮ್‌ಜೀತ್ ಕೌರ್, ಚಿಕ್ಕಪ್ಪ ಸರೂಪ್ ಚಂದ್, ಚಿಕ್ಕಮ್ಮ ಬಂಡಾರ್ ಮತ್ತು ಶಿನೋ, ಪುತ್ರಿಯರಾದ ಭಾವನಾ ಮತ್ತು ಅಂಕು ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ಇನ್ನು ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಒಂಬತ್ತು ಜನರ ಸಾವಿನ ಸುದ್ದಿ ದುಃಖಕರವಾಗಿದೆ. “ನಾನು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Continue Reading

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆ ಎಚ್ಚರಿಕೆ

karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ತಗ್ಗಿದ್ದರೂ ಕೆಲವು ಆಯ್ದ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಬಹುದು.

VISTARANEWS.COM


on

By

Karnataka weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್‌ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ (Karnataka weather Forecast) ಸಾಮಾನ್ಯವಾಗಿತ್ತು. ಆಗಸ್ಟ್‌ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ (Rain News) ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಜತೆಗೆ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಇದನ್ನೂ ಓದಿ: KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

ಮಾನ್ಸೂನ್‌‌‌ಗೆ ಲಗ್ಗೆ ಇಟ್ಟಿದೆ ಚಿಣ್ಣರ ಕಲರ್‌ ಫುಲ್‌ ರೈನ್‌ ಕೋಟ್ಸ್

ಮಾನ್ಸೂನ್‌ ಫ್ಯಾಷನ್‌ನಲ್ಲಿ ಆಕರ್ಷಕವಾದ ಕಿಡ್ಸ್ ರೈನ್‌ಕೋಟ್‌ಗಳು (Kids Raincoats) ಲಗ್ಗೆ ಇಟ್ಟಿವೆ. ಹೌದು, ಮಾನ್ಸೂನ್‌ ಸೀಸನ್‌ನಲ್ಲಿ ಎಲ್ಲಾ ವಯಸ್ಸಿನ ಮಕ್ಕಳಿಗೆ ಇಷ್ಟವಾಗುವಂತಹ ಬಗೆಬಗೆಯ ಕಾರ್ಟೂನ್‌ ಚಿತ್ತಾರವಿರುವಂತಹ ನಾನಾ ಬಗೆಯ ಆಕರ್ಷಕ ಬಣ್ಣ ಬಣ್ಣದ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ.

Kids Raincoats

ಮಕ್ಕಳನ್ನು ಉಲ್ಲಾಸಿತಗೊಳಿಸುವ ರೈನ್‌ಕೋಟ್ಸ್

“ ಪ್ರತಿ ಬಾರಿಯೂ ಮಾನ್ಸೂನ್‌ನಲ್ಲಿ ಮಕ್ಕಳಿಗೆ ನಾನಾ ವೆರೈಟಿ ವಿನ್ಯಾಸದ ರೈನ್‌ಕೋಟ್‌ಗಳು ಬಿಡುಗಡೆಗೊಳ್ಳುತ್ತಿರುತ್ತವೆ. ಮಕ್ಕಳು ಇಷ್ಟಪಟ್ಟು ಧರಿಸುವಂತಹ ಕಲರ್‌ ಹಾಗೂ ಚಿತ್ತಾರಗಳಿರುವಂತವು ಹೆಚ್ಚಾಗಿ ಬಿಕರಿಯಾಗುತ್ತವೆ. ಇದಕ್ಕೆ ಪೂರಕ ಎಂಬಂತೆ, ಮಳೆಗಾಲದಲ್ಲಿ ಔಟಿಂಗ್‌ ಅಥವಾ ಹೊರಗಡೆ ಹೋದಾಗ ಆಕರ್ಷಕವಾಗಿ ಕಾಣಿಸುವಂತಹ ಕಲರ್‌ಫುಲ್‌ ಡಿಸೈನ್‌ನ ರೈನ್‌ಕೋಟ್‌ಗಳು ಲೆಕ್ಕವಿಲ್ಲದಷ್ಟು ಡಿಸೈನ್‌ನಲ್ಲಿ ಆಗಮಿಸಿವೆ. ಉತ್ತಮ ಗುಣ ಮಟ್ಟದ ಬ್ರಾಂಡ್‌ಗಳಿಂದಿಡಿದು, ರಸ್ತೆ ಬದಿ ಮಾರುವಂತಹ ಲೋಕಲ್‌ ಡಿಸೈನ್‌ನಲ್ಲೂ ದೊರೆಯುತ್ತಿವೆ. ಆದರೆ, ಇವನ್ನು ಕೊಳ್ಳುವಾಗ ಮೆಟಿರಿಯಲ್‌ ಪರಿಶೀಲಿಸಿ ಕೊಳ್ಳುವುದು ಮುಖ್ಯ “ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌‌ಗಳು.

Kids Raincoats

ಟ್ರೆಂಡ್‌ನಲ್ಲಿರುವ ಚಿಣ್ಣರ ರೈನ್‌ಕೋಟ್ಸ್

ವಾಟರ್‌ ಪ್ರೂಫ್‌ನ ಹೂಡಿ ರೈನ್‌ಕೋಟ್ಸ್, ಯೂನಿಸೆಕ್ಸ್ ರೈನ್‌ಕೋಟ್ಸ್, ಅನಿಮಲ್‌ ಪ್ರಿಂಟ್‌, ಕಾರ್ಟೂನ್‌ ಪ್ರಿಂಟ್, ಗ್ರಾಫಿಕ್ ಪ್ರಿಂಟ್‌, ಪಾಲಿಸ್ಟರ್‌, ತ್ರಿ ಡಿ ಕಲರ್‌, ಹೆಣ್ಣುಮಕ್ಕಳ ಬಾರ್ಬಿ ಪ್ರಿಂಟ್ಸ್, ಕೊರಿಯನ್‌ ಸ್ಟೈಲ್‌, ಕೇಪ್‌ ಸ್ಟೈಲ್‌, ಟ್ರೆಂಚ್‌ ಕೋಟ್‌ ಸ್ಟೈಲ್‌, ಬ್ಯಾಕ್‌ಪ್ಯಾಕ್‌ ಕವರ್‌ ರೈನ್‌ಕೋಟ್‌ಗಳು ಈ ಸೀಸನ್‌ನಲ್ಲಿ ಸಾಕಷ್ಟು ಟ್ರೆಂಡಿಯಾಗಿವೆ. ಎಲ್ಲರೂ ಅವರವರ ಮಕ್ಕಳಿಗೆ ಮ್ಯಾಚ್‌ ಆಗುವಂತಹ ರೈನ್‌ಕೋಟ್‌ಗಳನ್ನು ಪೋಷಕರು ಖರೀದಿಸುವುದು ಕೂಡ ಇಂದು ಹೆಚ್ಚಾಗಿದೆ ಎನ್ನುತ್ತಾರೆ ರೈನ್‌ಕೋಟ್‌ ವ್ಯಾಪಾರಿಗಳು.

Kids Raincoats
Kids Raincoats

ಆನ್‌ಲೈನ್‌ನಲ್ಲಿ ರೈನ್‌ಕೋಟ್‌ ಅಬ್ಬರ

ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆಂದೇ ಈಗಾಗಲೇ ಕಿಡ್ಸ್ ಕೆಟಗರಿಯಲ್ಲಿ ಲೆಕ್ಕವಿಲ್ಲದಷ್ಟು ಬಗೆಯ ರೈನ್‌ಕೋಟ್‌ಗಳು ಲಗ್ಗೆ ಇಟ್ಟಿವೆ. ಕೆಲವು ಆನ್‌ಲೈನ್‌ ಶಾಪ್‌ಗಳು ಮಾನ್ಸೂನ್‌ ಆಫರ್‌ನಲ್ಲಿ ಕಡಿಮೆ ಬೆಲೆ ನಿಗಧಿಪಡಿಸಿದ್ದರೇ, ಇನ್ನು ಕೆಲವು ನ್ಯೂ ಅರೈವಲ್‌ ಕೆಟಗರಿಯಲ್ಲಿ ದರ ಹೆಚ್ಚಿಸಿವೆ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌ಗಳು.

ಇದನ್ನೂ ಓದಿ: Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

ಹೀಗಿರಲಿ ಮಕ್ಕಳ ರೈನ್‌ಕೋಟ್‌ ಆಯ್ಕೆ

  • ವಾಟರ್‌ಪ್ರೂಫ್‌ ರೈನ್‌ಕೋಟ್‌ಗೆ ಆದ್ಯತೆ ನೀಡಿ.
  • ಆದಷ್ಟೂ ಮಂಡಿ ಕೆಳಗಿನ ತನಕ ಉದ್ದವಿರುವ ರೈನ್‌ಕೋಟ್‌ ಖರೀದಿಸಿ.
  • ಮನೆಯಲ್ಲಿ ಇಬ್ಬರಿಗಿಂತ ಮಕ್ಕಳು ಹೆಚ್ಚಿದ್ದಲ್ಲಿ ಯೂನಿಸೆಕ್ಸ್ ರೈನ್‌ಕೋಟ್‌ ಬಳಸಬಹುದು.
  • ಟ್ರೆಂಡ್‌ಗೆ ತಕ್ಕಂತೆ ಬಿಡುಗಡೆಗೊಂಡಿರುವ ರೈನ್‌ಕೋಟ್‌ ಕೊಳ್ಳಿ.
  • ಮಕ್ಕಳನ್ನು ಉಲ್ಲಾಸಿತಗೊಳಿಸುವಂತಹ ಪ್ರಿಂಟ್ಸ್ ಇರುವಂತಹ ಕಲರ್‌ಫುಲ್‌ ರೈನ್‌ಕೋಟ್‌ ಚೂಸ್‌ ಮಾಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Blood Pressure
ಆರೋಗ್ಯ16 seconds ago

Sweet Potato Benefits: ಸವಿದವರೇ ಬಲ್ಲರು ಗೆಣಸಿನ ಸೊಗಸು! ಹಲವು ಆರೋಗ್ಯ ಸಮಸ್ಯೆಗೂ ಪರಿಹಾರ

Heavy Rain
ಮಳೆ8 mins ago

Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

Nanu Mattu Gunda-2 dog simba dubbing rakesh adiga in main roles
ಸ್ಯಾಂಡಲ್ ವುಡ್14 mins ago

Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

Jehanabad Stampede
ದೇಶ48 mins ago

Jehanabad Stampede: ಬಿಹಾರದ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 7 ಮಂದಿ ಸಾವು

Panjab Flood
ದೇಶ52 mins ago

Panjab Flood: ಪಂಜಾಬ್‌ನಲ್ಲೂ ಪ್ರವಾಹ ಸ್ಥಿತಿ; ಒಂದೇ ಕುಟುಂಬದ 8 ಮಂದಿ ಸೇರಿ 9 ಜನ ನೀರುಪಾಲು

ಬೆಂಗಳೂರು1 hour ago

Teachers Protest: ಶಿಕ್ಷಣ ಇಲಾಖೆ ವಿರುದ್ಧ ಸಮರ ಸಾರಿದ ಶಿಕ್ಷಕರು; ಇಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ

Independence day 2024
ದೇಶ3 hours ago

Independence day 2024: ನಮ್ಮ ಹೆಮ್ಮೆಯ ರಾಷ್ಟ್ರಧ್ವಜದ ಬಗ್ಗೆ ಈ 10 ಸಂಗತಿಗಳು ತಿಳಿದಿರಲಿ

Karnataka Weather forecast
ಮಳೆ3 hours ago

Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Dina bhavishya
ಭವಿಷ್ಯ4 hours ago

Dina Bhavishya : ಈ ದಿನ ಹತಾಶೆ ಹಾಗೂ ಆತುರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ

ಪ್ರಮುಖ ಸುದ್ದಿ8 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌