ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.
ಇದನ್ನೂ ಓದಿ: Electric shock : ಕರೆಂಟ್ ಶಾಕ್‌ನಿಂದ ಎಂಜಿನಿಯರ್ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಬೆಂಗಳೂರಿನಲ್ಲಿ ಸಾಧಾರಣ ಮಳೆ
ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಆರೆಂಜ್ ಅಲರ್ಟ್
ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ