Site icon Vistara News

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

karnataka weather Forecast Putur rain

ಮಂಗಳೂರು/ಬೆಂಗಳೂರು: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ (Heavy Rain) ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಜೂ.4ರಂದು ಗುಡುಗು ಸಹಿತ ಭಾರೀ ಮಳೆಯೊಂದಿಗೆ (Karnataka Weather forecast) ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನದಿಯಂತಾದ ಪುತ್ತೂರಿನ ರಸ್ತೆಗಳು

ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ ಹಾಗೂ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಗಳು ಜಲಾವೃತಗೊಂಡಿತ್ತು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದೆ ಈ ಅವಾಂತರಕ್ಕೆ ಕಾರಣ ಎಂದು ಕಿಡಿಕಾರಿದರು.

ಬೆಳಗಾವಿಯಲ್ಲೂ ಧಾರಾಕಾರ ಮಳೆ

ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಳಗಾವಿ ನಗರ ಸೇರಿ ಜಿಲ್ಲೆಯ ಹಲವಡೆ ಭಾರಿ ಮಳೆಗೆ ಬೀದಿ ಬದಿ ವ್ಯಾಪಾರಸ್ಥರು ಹೈರಾಣಾದರಿ. ಕಳೆದ ಹಲವು ದಿನಗಳಿಂದ ಬಿಸಿಲಿಗೆ ತತ್ತರಿಸಿದ ಜನಕ್ಕೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವ ಸಂಬಂಧ ಈಗಾಗಲೇ ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌ ತಂಡವು ಸೋಮವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಆಗಿದೆ. ಈ ವೇಳೆ ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಜತೆಗೆ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು.

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಇದೇ ವೇಳೆ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version