ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಮಧ್ಯಮ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಹಲವೆಡೆ ಭಾರೀ ಮಳೆಯಾಗಲಿದೆ. ಬೆಂಗಳೂರಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿಯು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Double Decker Flyover : ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ
ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ
ಅಲ್ಪ ಮಳೆಗೆ ಸರಕಾರಿ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರ
ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ