Site icon Vistara News

Karnataka Weather : ಇನ್ನೆರಡು ದಿನ ಬಿಸಿಲು ರಣ ರಣ; ಜನ ಹೈರಾಣ!

Heavy sunshine and hot girl

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳಲ್ಲಿ (ಗುರುವಾರ ಮತ್ತು ಶುಕ್ರವಾರ) ಒಣ ಹವೆ (Dry Weather) ಇರುವುದಲ್ಲದೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಹೇಳಿದೆ.

ದಕ್ಷಿಣ ಒಳನಾಡಲ್ಲಿ ಬಿಸಿಲು ಹೆಚ್ಚಳ

ದಕ್ಷಿಣ ಒಳನಾಡಿನಲ್ಲಿಯೂ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಇಲ್ಲೆಲ್ಲ ಮೈಸುಡುವ ಬಿಸಿಲು ಇರಲಿದ್ದು, ಮನೆಯಲ್ಲಿದ್ದರೂ ಜನ ಬೆವರು ಸುರಿಸುವ ಪರಿಸ್ಥಿತಿ ತಲೆದೋರಲಿದೆ.

ಇಲ್ಲೂ ಗರಿಷ್ಠ ತಾಪಮಾನದಲ್ಲಿ ಹೆಚ್ಚಳ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ‌

ಕರಾವಳಿಯಲ್ಲೂ ಸೆಕೆ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆಯು ತೀವ್ರತೆ ಪಡೆದುಕೊಂಡಿದೆ. ಸಮುದ್ರ ತೀರದಲ್ಲಿದ್ದರೂ ಜನರಿಗೆ ತಂಪು ಸಿಗುತ್ತಿಲ್ಲ. ಬಿಸಿಲು ಮೈಸುಡುತ್ತಿದೆ.

ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ವೇಗವಾಗಿ ಬೀಸಲಿದೆ ಗಾಳಿ

ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರು ಈಗ ಸೆಕೆಯ ನಾಡಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 35 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 21 ಡಿ.ಸೆ
ಕಲಬುರಗಿ: 37 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version