ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.
ತಾಪಮಾನ ಎಚ್ಚರಿಕೆ
ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್ ವೇವ್ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್
ಹೀಟ್‌ವೇವ್ ವಾರ್ನಿಂಗ್
ಹೀಟ್ ವೇವ್ಸ್ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.
1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.
5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.
7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.
8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.
9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ
11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.
12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.
13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.
15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.
ಸನ್‌ಸ್ಟ್ರೋಕ್ ಚಿಕಿತ್ಸೆಗಾಗಿ ಸಲಹೆಗಳು
-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.
ರೈತರು/ಕೃಷಿ ಕಾರ್ಮಿಕರು
ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ