Site icon Vistara News

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

Karnataka Weather Forecast

ಬೆಂಗಳೂರು: ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ಹಲವೆಡೆ ಗುಡುಗು ಸಹಿತ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸಚೂನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರವಾದ ಮಳೆಯಾಗಬಹುದು. ಮಲೆನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಧಗೆಯು ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶವು 39ರ ಗಡಿದಾಟಲಿದೆ. ಇದರಿಂದಾಗಿ ಉರಿ ಬಿಸಿಲು ಜನರನ್ನು ಹೈರಾಣಾಗಿಸಲಿದೆ.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ಹೀಟ್‌ ವೇವ್‌

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ತಾಪಮಾನ ಹೆಚ್ಚಳ ಇರಲಿ ಎಚ್ಚರ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version