ಬೆಂಗಳೂರು: ಮಧ್ಯ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.
ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್ ರೂಂನಲ್ಲೇ ಕೊಂದ ಯುವಕ
ಆರೆಂಜ್ ಮತ್ತು ಯೆಲ್ಲೋ ಅಲರ್ಟ್
ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಲ್ಕು ದಿನಗಳಿಗೆ ಹೀಟ್ ವೇವ್ ಅಲರ್ಟ್
ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.
25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.
26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.
27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.
ಬಿಸಿ ಮತ್ತು ಆರ್ದ್ರತೆ
ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ