ಬೆಂಗಳೂರು: ರಾಜ್ಯಾದ್ಯಂತ ವಾರಾಂತ್ಯದಲ್ಲಿ ಒಣ ಹವೆ (Dry weather) ಮುಂದುವರಿದಿದೆ. ಕೆಲವೆಡೆ ಕನಿಷ್ಠ ಹಾಗೂ ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಇದರಿಂದಾಗಿ ಬಿಸಿಲ ತೀವ್ರತೆ ಹೆಚ್ಚಾಗಿರಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ನಷ್ಟು ಹೆಚ್ಚಳವಾಗಲಿದೆ. ಇದರಿಂದಾಗಿ ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ, ರಾಯಚೂರು, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕೊಪ್ಪಳ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಜತೆಗೆ ಬಿಸಿಲ ತೀವ್ರತೆಯು ಹೆಚ್ಚಿರಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲೂ ತಾಪಮಾನದಲ್ಲಿ ಏರಿಳಿತ ಆಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲೂ ಬಿಸಿಲ ಝಳ ಇರಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಉಳಿದಂತೆ ಬೆಳಗ್ಗೆ ಆಕಾಶ ನಿರ್ಮಲವಾಗಿರಲಿದ್ದು, ಬಿಸಿಲ ತಾಪ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 19 ಡಿ.ಸೆ
ಹೊನ್ನಾವರ: 34 ಡಿ.ಸೆ- 20 ಡಿ.ಸೆ
ಕಲಬುರಗಿ: 36 ಡಿ.ಸೆ – 21 ಡಿ.ಸೆ
ಬೆಳಗಾವಿ: 34 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 21 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ