ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.
ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ
ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.
ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.
ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.
ಇದನ್ನೂ ಓದಿ: Hidden Camera : ಲೇಡಿಸ್ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್; ರೆಕಾರ್ಡ್ ಆಯ್ತು 2 ಗಂಟೆಗಳ ವಿಡಿಯೊ!
ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ
ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ