ಮಂಗಳೂರು/ಬೆಂಗಳೂರು: ಮಾ.22ರ ಬೆಳಗ್ಗೆ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಸುರಿದ ವರ್ಷದ ಮೊದಲ ಮಳೆಗೆ (Rain News) ಇಳೆಯು ತಂಪಾಗಿದೆ. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆ (Karnataka Weather Forecast) ಸುರಿದಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain alert) ಸಾಧ್ಯತೆ ಇದೆ. ಇನ್ನೂ ಉತ್ತರ ಒಳನಾಡಿನಲ್ಲಿ ಒಣಹವೆ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಯಾವುದೇ ಗುಡುಗು ಮುನ್ನೆಚ್ಚರಿಕೆ ಹಾಗೂ ತಾಪಮಾನದ ಮುನ್ಸೂಚನೆಯನ್ನು ನೀಡಿಲ್ಲ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Namma Metro : ಮಾ.24ರಂದು ಮೆಟ್ರೋ ಓಡಾಟ ಬೆಳಗ್ಗೆ 4:30ಕ್ಕೆ ಆರಂಭ; ಐಪಿಎಲ್ ಪಂದ್ಯದಂದು ಸಮಯ ವಿಸ್ತರಣೆ
ಕರಾವಳಿ, ದಕ್ಷಿಣ ಒಳನಾಡಲ್ಲಿ ಮಳೆ
ರಾಜ್ಯದಲ್ಲಿ ಗುರುವಾರದಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಗರಿಷ್ಠ ಉಷ್ಣಾಂಶ 37.6 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿದ್ದರೆ, ಕನಿಷ್ಠ ಉಷ್ಣಾಂಶ 19.5 ಡಿ.ಸೆ.ಬೀದರ್‌ನಲ್ಲಿ ದಾಖಲಾಗಿತ್ತು. ಸರಾಸರಿ ಕನಿಷ್ಠ ಉಷ್ಣಾಂಶ ಕೋಲಾರದಲ್ಲಿ 19.8 ಡಿಗ್ರಿ ಸೆಲ್ಸಿಯಸ್ ಹಾಗೂ ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಹಾಗೂ ಚಾಮರಾಜನಗರ, ಬೆಂಗಳೂರು ನಗರ, ತುಮಕೂರು ಮತ್ತು ಕಲಬುರಗಿ, ಬೀದರ್, ಮಂಡ್ಯ, ಹಾಸನ, ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ನಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ