Site icon Vistara News

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version