Site icon Vistara News

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

karnataka weather Forecast

ಬೆಂಗಳೂರು/ಕಾರವಾರ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಗಾಳಿ ಸಹಿತ ಹಗುರದಿಂದ (Rain News) ಕೂಡಿದ ಮಳೆಯಾಗಿದೆ. ಶಿವಾಜಿನಗರ, ವಸಂತನಗರ, ಶಾಂತಿನಗರ, ಜಯನಗರ, ವಿಜಯ ನಗರ, ಮಲ್ಲೇಶ್ವರಂ, ಯಶವಂತಪುರ, ರಾಜಾಜಿ ನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಹಲವೆಡೆ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು (Karnataka Weather Forecast) ಪರದಾಡಿದರು.

ಕೊಪ್ಪಳದಲ್ಲಿ ಹಳ್ಳ ದಾಟಲು ಹೋದವರ ಪರದಾಟ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಜಾಲಿಹಾಳ ಗ್ರಾಮದಲ್ಲಿ ಹಳ್ಳ ದಾಟಲು ಹೋಗಿ ಬೊಲೆರೋ ವಾಹನದಲ್ಲಿದ್ದ 15 ಕಾರ್ಮಿಕರು ಮಧ್ಯದಲ್ಲಿಯೇ ಸಿಲುಕಿಕೊಂಡಿದ್ದಾರೆ. ವಿಂಡ್ ಪವರ್ ನಲ್ಲಿ ಕೆಲಸ ಮಾಡುವ ಕಾರ್ಮಿಕರು, ವಾಪಸ್‌ ಜಾಲಿಹಾಳಗೆ ತೆರಳುತ್ತಿದ್ದರು. ಈ ವೇಳೆ ಹಳ್ಳದಲ್ಲಿ ಸಿಲುಕಿ ಪರದಾಟ ಅನುಭವಿಸಿದರು.

ಉತ್ತರ ಕನ್ನಡದಲ್ಲಿ ತಡರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಒಂದು ವಾರ ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 23 ರಂದು ಸಮುದ್ರ ಭಾಗದಲ್ಲಿ 45 ರಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಮುನ್ಸೂಚನೆ ನೀಡಲಾಗಿದೆ.

ಕೊಡಗು ಜನತೆಗೆ ಜಿಲ್ಲಾಡಳಿತ ಸೂಚನೆ

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕೊಡಗಿಗೆ ‌ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂ.23, 24 ಹಾಗೂ 25ರಂದು ಎಚ್ಚರಿಕೆಯಿಂದ ಇರುವಂತೆ ಕೊಡಗಿನ ಜನತೆಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸುಮಾರು 115 ರಿಂದ 204.4 ಮೀ.ಮಿ‌ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

ಮಳೆಯಿಂದ ಹಾಳಾಗಿರುವ ಸರ್ಕಾರಿ ಶಾಲೆ

ಭಾರಿ ಮಳೆಯಿಂದಾಗಿ ಸರ್ಕಾರಿ ಶಾಲೆಯೊಂದು ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಗಿಲಕೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಇಂಥಹದೊಂದು ಅವಸ್ಥೆ ಇದೆ. ಮಳೆ ಬಂದಾಗ ಶಾಲೆಯ ಚಾವಣಿ, ಶಾಲೆಯ ಅಡುಗೆ ಕೋಣೆ ಸೋರುತ್ತಿದೆ. ಶಾಲೆ ಕೊಠಡಿ ಒಳಗೆ ಭಯದ ವಾತಾವರಣದಲ್ಲೇ ಮಕ್ಕಳು ಕೂರುವಂತಾಗಿದೆ. ಮಳೆ ನೀರು ಸೋರಿಕೆಯಿಂದಾಗಿ ಶಾಲಾ ಆವರಣದಲ್ಲಿ ಸಿಬ್ಬಂದಿ ಅಡುಗೆ ಮಾಡುತ್ತಿದ್ದಾರೆ. ಇದುವರೆಗೂ ಯಾವೊಬ್ಬ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿಲ್ಲ. ಇತ್ತ ಶಾಲೆಯ ಶಿಕ್ಷಕರು ಅಸಹಾಯಕರಾಗಿದ್ದಾರೆ.

ಶನಿವಾರ ಇಲ್ಲೆಲ್ಲ ಮಳೆ ಅಬ್ಬರ

ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಹಾಗೂ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳುರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಜತೆಗೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version