ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಲವಾದ ಮೇಲ್ಮೈ ಮಾರುತಗಳು (Karnataka Weather Forecast) ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಮಲೆನಾಡಿನ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್ ಸವಾರ ಅಪಘಾತಕ್ಕೆ ಬಲಿ
ಬೆಂಗಳೂರಿನಲ್ಲಿ ಚದುರಿದ ಮಳೆ
ಬೆಂಗಳೂರು ವ್ಯಾಪ್ತಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಕರಾವಳಿಗೆ ಯೆಲ್ಲೋ ಅಲರ್ಟ್
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ