ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ದಾವಣಗೆರೆ, ರಾಮನಗರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಳ್ಳಾರಿ, ಧಾರವಾಡ, ಹಾವೇರಿ ಮತ್ತು ಗದಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆ ಅಬ್ಬರ ಜೋರಾಗಿ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ : ಚಾಮರಾಜನಗರದಲ್ಲಿ ಕಳ್ಳ ಬೇಟೆಗಾರರ ಹಾವಳಿ; ಅರಣ್ಯ ಸಿಬ್ಬಂದಿ ಗುಂಡೇಟಿಗೆ ಒಬ್ಬ ಬಲಿ
ಈ ಜಿಲ್ಲೆಗಳಿಗೆ ಆರೆಂಜ್- ಯೆಲ್ಲೋ ಅಲರ್ಟ್
ನ.5 ರಂದು ಕೊಡಗಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಹಾಸನ, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲೂ ಭರ್ಜರಿ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ -20 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 21 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 24 ಡಿ.ಸೆ
ಬೆಳಗಾವಿ: 30 ಡಿ.ಸೆ – 20 ಡಿ.ಸೆ
ಕಾರವಾರ: 35 ಡಿ.ಸೆ – 25 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.