Site icon Vistara News

Karnataka Weather : ವಾರಾಂತ್ಯದಲ್ಲಿ ಇಲ್ಲೆಲ್ಲ ತಾಪಮಾನ ದುಪ್ಪಟ್ಟು

Kalaburgi has recorded the highest maximum temperature

ಬೆಂಗಳೂರು: ವಾರಾಂತ್ಯದಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಉತ್ತರ ಒಳನಾಡಲ್ಲಿ ಕನಿಷ್ಠ ಉಷ್ಣಾಂಶ ಗಮರ್ನಾಹವಾಗಿ 2-4 ಡಿ.ಸೆನಷ್ಟು ಇಳಿಕೆಯಾಗಲಿದೆ.

ಕರಾವಳಿ ಹಾಗೂ ಒಳನಾಡಲ್ಲಿ ಬಿಸಿಲ ಧಗೆ

ತಾಪಮಾನದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಲಿದೆ.

ಬೆಂಗಳೂರಲ್ಲಿ ಹೇಗಿರಲಿದೆ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶವು ನಿರ್ಮಲವಾಗಿರಲಿದೆ. ಬೆಳಗಿನ ಜಾವವು ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 18 ಡಿ.ಸೆ ಇರಲಿದೆ.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ರಾಜ್ಯಾದ್ಯಂತ ಗುರುವಾರದಂದು ಒಣಹವೆ ಮುಂದುವರಿದಿತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37.4 ಡಿ.ಸೆ ದಾಖಲಾಗಿತ್ತು. ಕನಿಷ್ಠ ಉಷ್ಣಾಂಶ 14.9 ಡಿ.ಸೆ ಮಂಡ್ಯದಲ್ಲಿ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 15.6 ಡಿಗ್ರಿ ಸೆಲ್ಸಿಯಸ್ ಹಾಗೂ ರಾಯಚೂರಿನಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ ಇತ್ತು. ಹಾವೇರಿ ಮತ್ತು ರಾಯಚೂರಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ನಿಂದ 43 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version