Site icon Vistara News

Karnataka Weather : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ; ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ

Karnataka Weather Forecast Cloudy weather in Bengaluru Moderate rainfall in coastal and Malnad regions

ಬೆಂಗಳೂರು: ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿಯಲ್ಲಿ (Karnataka Weather Forecast) ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ ದುರ್ಬಲಗೊಂಡಿದೆ. ಶುಕ್ರವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಒಣ ಹವಾಮಾನ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

Exit mobile version