Site icon Vistara News

Karnataka Weather : ಕರಾವಳಿ-ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸಾಧ್ಯತೆ

Karnataka Weather Forecast girl holding Umbrella and waiting For rain

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಶುಷ್ಕ ವಾತಾವರಣ (Dry Weather) ಇದ್ದರೂ ಕೆಲವೆಡೆ ಬಿಸಿಲ ತಾಪಮಾನವು (Karnataka Weather Forecast) ಮುಂದುವರಿಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಲಿದೆ. ಮಿಕ್ಕ ಎಲ್ಲ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ

ದಕ್ಷಿಣ ಒಳನಾಡಿನ ಮೈಸೂರು ಮತ್ತು ತುಮಕೂರಿನಲ್ಲಿ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ ಮತ್ತು ಬಾಗಲಕೋಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಳಿದೆಡೆ ಒಣ ಹವೆ ಮುಂದುವರಿಯಲಿದೆ.

ಇದನ್ನೂ ಓದಿ: World Tuberculosis Day: ಇಂದು ವಿಶ್ವ ಕ್ಷಯರೋಗ ದಿನ; ರೋಗ ಬಾರದಂತೆ ತಡೆಯುವುದು ಹೇಗೆ?

ಕರಾವಳಿ-ಮಲೆನಾಡಲ್ಲಿ ಗುಡುಗು ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲೂ ಮಳೆಗೆ ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಒಣಹವೆ

ಬೆಂಗಳೂರು ಸುತ್ತಮುತ್ತ ಸೋಮವಾರದಂದು ಒಣಹವೆ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 35 ಹಾಗೂ 21ರ ಆಸುಪಾಸಿನಲ್ಲಿರಲಿದೆ. ಸದ್ಯಕ್ಕೆ ಬೆಂಗಳೂರಿಗೆ ಯಾವುದೇ ಮಳೆ ಸೂಚನೆ ಇಲ್ಲ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 34 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 22 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಕಲಬುರಗಿ: 40 ಡಿ.ಸೆ – 25 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version