Site icon Vistara News

Karnataka Weather : ಒಳನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಬರಲಿದೆ ಅಲ್ಪ ಮಳೆ! ಬೆಂಗಳೂರು ಕಥೆ ಏನು?

Monsoon

ಬೆಂಗಳೂರು: ಮಂಗಳವಾರ ಕರಾವಳಿ (Coastal Karnataka) ಮತ್ತು ದಕ್ಷಿಣ ಒಳನಾಡಿನಲ್ಲಿ (South Interior Karnataka) ಒಣ ಹವೆ ಇದ್ದರೂ, ಉತ್ತರ ಒಳನಾಡಿನ (North Interior Karnataka) ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ (ಬುಧವಾರ ಮತ್ತು ಗುರುವಾರ) ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.

ಮಂಗಳವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಗರಿಷ್ಠ ಉಷ್ಣಾಂಶವು ಕೊಪ್ಪಳದಲ್ಲಿ ದಾಖಲಾಗಿದೆ. ಅಂದರೆ ಅಲ್ಲಿ ಬರೋಬ್ಬರಿ 38.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳ ಸ್ಥಿತಿಯನ್ನು ಗಮನಿಸುವುದಾದರೆ ವಿಜಯಪುರದಲ್ಲಿ 17 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿ ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಸುತ್ತಲಿನ ಒಂದೆರಡು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1 – 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಸೆಕೆಯು ಹೆಚ್ಚಾಗಿ ಬಾಧಿಸಲಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಅವುಗಳೆಂದರೆ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲವು ಕಡೆ ತಾಪಮಾನದಲ್ಲಿ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಲ್ಲಿ ರಾತ್ರಿ ಬಿಸಿ ಗಾಳಿ

ರಾಜಧಾನಿ ಬೆಂಗಳೂರಲ್ಲಿ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ಉಳಿದಂತೆ ಬಿಸಿಲ ಧಗೆಯು ಸುಸ್ತು ಮಾಡಲಿದೆ. ರಾತ್ರಿಯಂದು ಬಿಸಿ ಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಇನ್ನೂ ಓದಿ: Healthy Drinks For Summer: ಬೇಸಿಗೆ ಬರುತ್ತಿದ್ದಂತೆ ನಮ್ಮ ದೇಹ ಬಯಸುವ ಆರೋಗ್ಯಕರ ಪೇಯಗಳಿವು!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 34 ಡಿ.ಸೆ – 22 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 22 ಡಿ.ಸೆ
ಗದಗ: 37 ಡಿ.ಸೆ – 21 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 39 ಡಿ.ಸೆ – 26 ಡಿ.ಸೆ
ಬೆಳಗಾವಿ: 35 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

Exit mobile version