ಬೆಂಗಳೂರು: ದಕ್ಷಿಣ ಒಳನಾಡಲ್ಲಿ ಸೋಮವಾರದಂದು ಹಗುರದಿಂದ ಕೂಡಿದ ಮಳೆಯಾಗುವ (Rain News) ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆಯೇ (Dry Weather) ಮೇಲುಗೈ ಸಾಧಿಸಲಿದೆ.
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗಿರುವ ಸಾಧ್ಯತೆ ಇದೆ. ಇದರಿಂದಾಗಿ ಬಿಸಿಲ ಧಗೆ ಮತ್ತಷ್ಟು ಹೆಚ್ಚಾಗಿಯೇ ಇರಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3-5 ಡಿ.ಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ದುಪ್ಪಟ್ಟು ಆಗಿ ಇರಲಿದೆ.
ಬೆಂಗಳೂರಲ್ಲಿ ಮರೆಯಾಗುವ ಸೂರ್ಯ
ಬೆಂಗಳೂರಿನ ಸುತ್ತಮುತ್ತ ಕೆಲವಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆದರೂ ಸೆಕೆ ಹೆಚ್ಚಾಗಿರಲಿದೆ. ಗರಿಷ್ಠ ಉಷ್ಣಾಂಶ 32 ಹಾಗೂ ಕನಿಷ್ಠ ಉಷ್ಣಾಂಶ 21 ಡಿ.ಸೆ ಇರುವ ಸಾಧ್ಯತೆ ಇದೆ.
ಇದನ್ನೂ ಓದಿ: Food Hacks: ಕರಿದ ತಿನಿಸುಗಳನ್ನು ಹೆಚ್ಚು ಹೊತ್ತು ಗರಿಗರಿಯಾಗಿರಿಸಬೇಕೇ? ಇಲ್ಲಿವೆ ಪಂಚಸೂತ್ರಗಳು!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 32 ಡಿ.ಸೆ -20 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 17 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 21 ಡಿ.ಸೆ
ಕಲಬುರಗಿ: 36 ಡಿ.ಸೆ – 22 ಡಿ.ಸೆ
ಬೆಳಗಾವಿ: 33 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ