ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry weather) ಇರಲಿದ್ದು, ಹಲವೆಡೆ ಮಳೆಯಾಗುವ (Rain news) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.
ಮುಂದಿನ 24 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿಯಲ್ಲಿ ಒಣಹವೆ ಇರಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಸುರಿಯಬಹುದು.
ಕೊಡಗು, ಹಾಸನ, ರಾಮನಗರ, ಮಂಡ್ಯ, ಮೈಸೂರು ಮತ್ತು ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.
ತಾಪಮಾನದ ಮುನ್ಸೂಚನೆ
ಉತ್ತರ ಒಳನಾಡಿನ ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಬೆಂಗಳೂರಲ್ಲಿ ಮಂಕಾಗುವ ಸೂರ್ಯ
ಮುಂದಿನ 48 ಗಂಟೆಯೊಳಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.
ಇದನ್ನೂ ಓದಿ:Physical Abuse: ಯುವತಿಯನ್ನು ಹಿಂಬಾಲಿಸಿ ಹಿಂದಿನಿಂದ ಬಂದು ತಬ್ಬಿಕೊಂಡ ಕಾಮುಕ!
ಕೊಪ್ಪಳದಲ್ಲಿ ಗರಿಷ್ಠ ತಾಪಮಾನ ದಾಖಲು
ರಾಜ್ಯಾದ್ಯಂತ ಮಂಗಳವಾರ ಒಣ ಹವೆ ಮುಂದುವರಿದಿತ್ತು. ಗರಿಷ್ಠ ಉಷ್ಣಾಂಶ 39.5 ಡಿ.ಸೆ ಕೊಪ್ಪಳದಲ್ಲಿ ದಾಖಲಾಗಿದ್ದರೆ, ಕನಿಷ್ಠ ಉಷ್ಣಾಂಶ 18.4 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.5 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಬೆಳಗಾವಿ, ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ಬೀದರ್, ರಾಮನಗರ, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ನಗರ, ವಿಜಯಪುರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಕನಿಷ್ಠ ಉಷ್ಣಾಂಶ 15-16 ಡಿ. ಸೆ ಇತ್ತು. ಕಲಬುರಗಿ, ಹಾವೇರಿ, ಬೀದರ್, ಕೊಪ್ಪಳ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ರಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ