Site icon Vistara News

Karnataka Weather : ಇಂದು ಕರಾವಳಿಯಲ್ಲಿ ಸಾಧಾರಣ ಮಳೆ; ಉಳಿದೆಡೆ ಮುಂದುವರಿಯಲಿದೆ ಒಣಹವೆ

karnataka weather forecast

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka Weather Forecast) ಕಡಿಮೆ ಆಗಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Rain News) ಮುನ್ಸೂಚನೆಯನ್ನು ನೀಡಿದೆ. ಸೆ.16ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಸೇರಿ ಮಲೆನಾಡನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಮುಖ್ಯವಾಗಿ ಒಣ ಹವೆಯೇ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನ ಕೆಲವೆಡೆ ಪ್ರತ್ಯೇಕ ಸ್ಥಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇಲ್ಲೆಲ್ಲ ಮಳೆಯ ಸಿಂಚನ

ನಿನ್ನೆ ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಉಡುಪಿಯ ಕೋಟ 3 ಸೆಂ.ಮೀ, ಗೋಕರ್ಣ, ಹೊನ್ನಾವರ ವೀಕ್ಷಣಾಲಯ, ಶಿರಾಲಿ ಪಿಟಿಒ, ಸಿದ್ದಾಪುರ, ಗೇರ್ಸೊಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕುಂದಾಪುರ, ಉಡುಪಿ, ಕ್ಯಾಸಲ್ ರಾಕ್, ಉಪ್ಪಿನಂಗಡಿ, ಕಾರ್ಕಳ, ಕುಮಟಾ ಹಾಗೂ ಲೋಂಡಾ, ಕಮ್ಮರಡಿ, ಹಾಸನ ಪಿಟ್ಟಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version