ಬೆಂಗಳೂರು: ಚಳಿಗಾಲದಲ್ಲಿ ತಾಪಮಾನ ನಿಧಾನಕ್ಕೆ ಏರುತ್ತಿದೆ. ರಾತ್ರಿ ಚಳಿಯಿದ್ದರೂ, ಹಗಲಿನಲ್ಲಿ ಬಿಸಿಲಿನ ತಾಪ ಏರುತ್ತಿದೆ. ಘಳಿಗೆಗೊಂದು ವಾತಾವರಣವೂ ಜನರಲ್ಲಿ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತಿದೆ. ಬುಧವಾರದಂದು ಶುಷ್ಕ ವಾತಾವರಣವೇ (Dry Weather) ಇರಲಿದೆ. ಬೆಳಗಿನ ಜಾವ ಹಾಗೂ ರಾತ್ರಿಯಂದು ಥಂಡಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.
ರಾಜಧಾನಿ ಬೆಂಗಳೂರಲ್ಲಿ ಮೈ ನಡುಗಿಸುವ ಚಳಿ ನಡುವೆಯೂ ಮಧ್ಯಾಹ್ನದ ಬಿಸಿಲು ಕಿರಿಕಿರಿಯುನ್ನುಂಟು ಮಾಡಲಿದೆ. ಬೆಳಗಿನ ಜಾವ ಮಂಜು ಮುಸುಕುವ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Theft Case : ಸಾಲದ ಸುಳಿಗೆ ಸಿಲುಕಿ ಕಳ್ಳರಾದ್ರು ಬ್ಯುಸಿನೆಸ್ ಮ್ಯಾನ್, ಲೋಕೋ ಪೈಲಟ್!
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ತುಮಕೂರಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿಯೊಂದಿಗೆ ಒಣ ಹವೆ ಇರಲಿದೆ.
ಇದನ್ನೂ ಓದಿ:Fraud Case : ಪಿಎಂ ಹೆಸರಲ್ಲಿ ಲೂಟಿ; ಲಕ್ಷ ಲಕ್ಷ ಕಳೆದುಕೊಂಡ ಬೆಂಗಳೂರು ಉದ್ಯಮಿ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 16 ಡಿ.ಸೆ
ಗದಗ: 32 ಡಿ.ಸೆ – 16 ಡಿ.ಸೆ
ಹೊನ್ನಾವರ: 35 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 15 ಡಿ.ಸೆ
ಕಾರವಾರ: 35 ಡಿ.ಸೆ – 20 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ