ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ (Dry Weather) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಕನಿಷ್ಠ ಉಷ್ಣಾಂಶವು 5 ಡಿ.ಸೆಕ್ಕಿಂತ ಹೆಚ್ಚು ಇರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ಡಿ.ಸೆ ಕಡಿಮೆ ಆಗಲಿದೆ.
ಕೆಲವೆಡೆ ಚಳಿ ಹಾಗೂ ಬಿಸಿಲು ಒಟ್ಟೊಟ್ಟಿಗೆ ದಾಳಿ ಮಾಡಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡುಗು, ಹಾಸನದಲ್ಲಿ ತಾಪಮಾನದ ಏರಿಳಿತ ಇರಲಿದೆ.
ಬೆಂಗಳೂರಲ್ಲಿ ಮುಂಜಾನೆ ಮಂಜು, ಮಧ್ಯಾಹ್ನ ಬಿಸಿಲ ತಾಪ
ರಾಜಧಾನಿ ಬೆಂಗಳೂರಲ್ಲಿ ಆಕಾಶವು ನಿರ್ಮಲವಾಗಿರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 17 ಡಿ.ಸೆ ಇರಲಿದೆ. ಮುಂಜಾನೆ ಮಂಜಿನಿಂದ ವಾತಾವರಣ ಇದ್ದರೆ, ಮಧ್ಯಾಹ್ನ ಬಿಸಿಲ ತಾಪ ಹೆಚ್ಚಾಗಿರಲಿದೆ. ರಾತ್ರಿಯಂದು ಬಿಸಿ ಗಾಳಿ ಬೀಸಲಿದೆ.
ಇದನ್ನೂ ಓದಿ: Parashurama Theme Park: ಸಿಐಡಿಗೆ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ; ಸುನಿಲ್ ಕುಮಾರ್ ಸ್ವಾಗತ
ಗರಿಷ್ಠ- ಕನಿಷ್ಠ ತಾಪಮಾನ ಏರಿಕೆ
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಬಿಸಿಲ ಧಗೆ ಇನ್ನಷ್ಟು ಹೆಚ್ಚಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಚಾಮರಾಜನಗರದಲ್ಲಿ ಇಳಿಕೆಯಾದ ಕನಿಷ್ಠ ಉಷ್ಣಾಂಶ
ರಾಜ್ಯಾದ್ಯಂತ ಬುಧವಾರ ಒಣಹವೆ ಇತ್ತು. ಕಡಿಮೆ ಕನಿಷ್ಠ ಉಷ್ಣಾಂಶ ಚಾಮರಾಜನಗರದಲ್ಲಿ 13.2 ಡಿ.ಸೆ ದಾಖಲಾಗಿತ್ತು. ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 10ರಿಂದ 13 ಡಿ.ಸೆ ದಾಖಲಾಗಿತ್ತು. ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40ರಿಂದ 42ಡಿ.ಸೆ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ