ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉಡುಪಿಯ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ (Karnataka Weather Forecast) ಸಾಧ್ಯತೆ ಇದೆ. ಹೀಗಾಗಿ ಉರಿ ಉರಿ ಸೆಕೆ (Dry weather) ಇರಲಿದೆ.
ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಕನಿಷ್ಠ ಹಾಗೂ ಗರಿಷ್ಠ ತಾಪಮಾನವು 2-3 ಡಿ.ಸೆ ಏರಿಕೆ ಆಗಲಿದೆ. ಇದರಿಂದಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಮತ್ತು ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ ಶುಷ್ಕ ವಾತಾವರಣ ಇರಲಿದೆ.
ಇನ್ನೂ ಉತ್ತರಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲ ಧಗೆ ಹೆಚ್ಚಾಗಲಿದೆ.
ಬೆಂಗಳೂರಲ್ಲಿ ಚಳಿ-ಬಿಸಿಲು ಒಟ್ಟೊಟ್ಟಿಗೆ ದಾಳಿ
ಬೆಂಗಳೂರಲ್ಲಿ ಮುಂಜಾನೆ ಸಮಯ ದಟ್ಟ ಮಂಜು ಆವರಿಸಲಿದೆ. ಆದರೆ ನಂತರ ಆಕಾಶವು ನಿರ್ಮಲವಾಗಿ ಇರಲಿದ್ದು, ಬಿಸಿಲ ತಾಪ ಹೆಚ್ಚಿರಲಿದೆ. ಗರಿಷ್ಠ ಹಾಗು ಕನಿಷ್ಠ ಉಷ್ಣಾಂಶವು ಕ್ರಮವಾಗಿ 31 ಹಾಗೂ 18 ಡಿ.ಸೆ ಇರಲಿದೆ.
ಇನ್ನೂ ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ನಿಂದ 14 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗರಿಷ್ಠ ತಾಪಮಾನ 43 ನಿಂದ 45 ಡಿ.ಸೆ ಹಾವೇರಿ ಮತ್ತು ರಾಯಚೂರಲ್ಲಿ ದಾಖಲಾಗಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 17 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 21 ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 36 ಡಿ.ಸೆ – 16 ಡಿ.ಸೆ
ಬೆಳಗಾವಿ: 34 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ