Site icon Vistara News

Karnataka Weather: ಬಿಸಿಲಿಗೆ ಕಂಗೆಡುತ್ತಿದೆ ಕರಾವಳಿ; ಉತ್ತರ ಕರ್ನಾಟಕ ಮಂದಿ ವಿಲವಿಲ

Weather

ಬೆಂಗಳೂರು: ರಾಜ್ಯಾದ್ಯಂತ ಉರಿಬಿಸಿಲು ಇರಲಿದ್ದು, ಶುಷ್ಕ ವಾತಾವರಣ ಮೇಲುಗೈ (Dry weather) ಸಾಧಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ತಾಪಮಾನ ಏರಿಕೆ ಆಗಲಿದ್ದು, ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಲ್ಲೂ ಉಷ್ಣಾಂಶದಲ್ಲಿ ಏರಿಕೆ (Karnataka Weather) ಆಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಏರಿಕೆ ಆಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ – 19 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 35 ಡಿ.ಸೆ – 21 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version